ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ–ವೆಂಗುರ್ಲಾ: ರಾಷ್ಟ್ರೀಯ ಹೆದ್ದಾರಿಗೆ ಮನವಿ

Last Updated 7 ಏಪ್ರಿಲ್ 2022, 12:27 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಹಾಗೂ ಮಹಾರಾಷ್ಟ್ರದ ಚಂದಗಡ ಶಾಸಕ ರಾಜೇಶ ಪಾಟೀಲ ಅವರು ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ, ‘ಭಾರತಾಮಾಲಾ’ ಯೋಜನೆಯಲ್ಲಿ ಬೆಳಗಾವಿ– ವೆಂಗುರ್ಲಾ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿ ನಿರ್ಮಿಸುವಂತೆ ಗುರುವಾರ ಮನವಿ ಸಲ್ಲಿಸಿದ್ದಾರೆ.

‘ಬೆಳಗಾವಿಯಿಂದ ಸುಳಗ, ಬಾಚಿ, ಚಂದಗಡ, ಅಂಬೋಲಿ ಮಾರ್ಗವಾಗಿ 127 ಕಿ.ಮೀ. ರಾಜ್ಯ ಹೆದ್ದಾರಿಯನ್ನು ಭಾರತಮಾಲಾ ಯೋಜನೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಿಸಿದಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ಸಂಪರ್ಕವು ಉತ್ತಮವಾಗುತ್ತದೆ. ಗಡಿಯಲ್ಲಿರುವ ಬೆಳಗಾವಿ ಮತ್ತು ಚಂದಗಡ ತಾಲ್ಲೂಕಿನ ಜನರಿಗೆ ಅನುಕೂಲವಾಗುತ್ತದೆ. ಈ ಭಾಗದಲ್ಲಿನ ಜನರಿಗೆ ಉದ್ಯೋಗ ಅವಕಾಶಗಳು ಸಿಗುತ್ತವೆ. ಕೃಷಿಕರು ಮತ್ತು ಇತರ ವ್ಯಾಪಾರಿಗಳಿಗೆ ಪ್ರಯೋಜನವಾಗುತ್ತದೆ’ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

‘ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮಂಜೂರು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು’ ಎಂದು ಬೆನಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT