ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಆಗ್ರಹ

Published 9 ಜುಲೈ 2023, 14:17 IST
Last Updated 9 ಜುಲೈ 2023, 14:17 IST
ಅಕ್ಷರ ಗಾತ್ರ

ಚನ್ನಮ್ಮನ ಕಿತ್ತೂರು: ದೇಶ ಸ್ವಾತಂತ್ರ್ಯ  ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದರೂ ರಾಜ್ಯದಲ್ಲಿಯ ಇನ್ನೂ 19,806 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಲಾಗಿಲ್ಲ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಮಹಾಂತೇಶ ಕಂಬಾರ ಬೇಸರ ವ್ಯಕ್ತಪಡಿಸಿದರು.

ಭಾನುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಂತ ಕಟ್ಟಡ ಇಲ್ಲಿದಿರುವುದರಿಂದ ಪಂಚಾಯ್ತಿ ಕಟ್ಟಡ, ಬಾಡಿಗೆ ಕಟ್ಟಡ ಸೇರಿ ವಿವಿಧ ಕಡೆಗೆ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಒಟ್ಟು 66,361 ಅಂಗನವಾಡಿ ಕೇಂದ್ರಗಳಿವೆ. ಇವುಗಳಲ್ಲಿ 46,559 ಕೇಂದ್ರಗಳು ಸ್ವಂತ ಕಟ್ಟಡಗಳಲ್ಲಿ, 1,055 ಪಂಚಾಯ್ತಿ ಕಟ್ಟಡ, 2,457 ಸಮುದಾಯ ಭವನ, 68 ಯುವಕ ಮಂಡಳದ, 43 ಮಹಿಳಾ ಮಂಡಳದ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಮಾಹಿತಿ ನೀಡಿದೆ. ಬೇರೆ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳಿಗೆ ಸ್ವಂತ ಕೇಂದ್ರಗಳನ್ನು ಇನ್ನಾದರೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT