ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಪೀಟರ್ಸ್‌ ಪರೀಕ್ಷೆಯನ್ನೂ ರದ್ದುಗೊಳಿಸಲು ಮನವಿ

Last Updated 10 ಜೂನ್ 2021, 6:58 IST
ಅಕ್ಷರ ಗಾತ್ರ

ಬೆಳಗಾವಿ: ದ್ವಿತೀಯ ಪಿಯು ರಿಪೀಟರ್ಸ್‌ ಹಾಗೂ ಖಾಸಗಿ ವಿದ್ಯಾರ್ಥಿಗಳಿಗೂ ಪರೀಕ್ಷೆ ರದ್ದುಪಡಿಸಿ, ಪ್ರಥಮ ವರ್ಷದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಆರ್. ಅಭಿಲಾಷ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‘ಕೊರೊನಾ ಸೋಂಕು ವ್ಯಾ‍ಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಘೋಷಿಸಿದ್ದಾರೆ. ಹೀಗಿರುವಾಗ, ರಿಪೀಟರ್ಸ್‌ ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸುವುದು ಎಂದು ತಿಳಿಸಿರುವುದು ತಪ್ಪು ನಿರ್ಧಾರವಾಗಿದೆ. ಆ ವಿದ್ಯಾರ್ಥಿಗಳ ಆರೋಗ್ಯದ ವಿಷಯವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT