ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆಯ ಪಿಂಚಣಿ ಯೋಜನೆಗೆ ಸರ್ಕಾರಿ ನೌಕರರ ಆಗ್ರಹ

Last Updated 2 ಅಕ್ಟೋಬರ್ 2021, 14:43 IST
ಅಕ್ಷರ ಗಾತ್ರ

ಬೆಳಗಾವಿ: ‘ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಪುನರ್‌ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

‘ಸರ್ಕಾರಿ ಯೋಜನೆಗಳನ್ನು ತ್ವರಿತವಾಗಿ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ನೌಕರರಾದ ನಾವು ಶ್ರಮಿಸುತ್ತಿದ್ದೇವೆ. ಆದರೆ, ಎನ್‌ಪಿಎಸ್‌ ಮೂಲಕ ನಮಗೆ ಅನಾನುಕೂಲವೇ ಹೆಚ್ಚಿದೆ. 2006ರ ಏ.1ರ ನಂತರ ನೇಮಕಗೊಂಡವರಿಗೆ ಎನ್‌ಪಿಎಸ್ ಜಾರಿಗೊಳಿಸಲಾಗಿದೆ. ಇದರಿಂದಾಗಿ 6 ಲಕ್ಷ ನೌಕರರು ಮತ್ತು ಅವರ ಕುಟುಂಬದವರ ಭವಿಷ್ಯ ಅತಂತ್ರವಾಗಿದೆ. ವಯೋನಿವೃತ್ತಿ ನಂತರ ಬದುಕು ಸಾಗಿಸುವುದು ಎನ್ನುವ ಆತಂಕ ಅವರನ್ನು ಕಾಡುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಗದೀಶಗೌಡ ಪಾಟೀಲ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಯಕುಮಾರ ಹೆಬ್ಬಳಿ, ಚಂದ್ರಶೇಖರ ಕೋಲಕಾರ, ಶ್ರವಣ ರಾಣವ್ವಗೋಳ, ರಮೇಶ ಗೋಣಿ, ವೈ.ಬಿ. ಪೂಜೇರ, ಕೆ.ಎಸ್. ರಾಚಣ್ಣವರ, ಸಿದ್ದಣ್ಣ ಗಾಣಗಿ, ಪ್ರಕಾಶ ದೇಯಣ್ಣವರ, ಬಾಬು ಸೊಗಲಣ್ಣವರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT