ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಒತ್ತಾಯ

Last Updated 17 ಡಿಸೆಂಬರ್ 2021, 3:01 IST
ಅಕ್ಷರ ಗಾತ್ರ

ಬೆಳಗಾವಿ: ‘2022ರ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಬೆಳಗಾವಿಯಲ್ಲಿ ನಡೆಸಲು ಕ್ರಮ ಕೈಗೊಳ್ಳಬೇಕು’ ಎಂದು
ಚಲನಚಿತ್ರ ನಟ, ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸದಸ್ಯ ಎನ್. ನಟರಾಜ್ ಹಂಜಾಗಿಮಠ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಚಲನಚಿತ್ರ ಅಕಾಡೆಮಿಯಿಂದ ಆಯೋಜಿರುವ 12 ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳು ಬಹುತೇಕ ಬೆಂಗಳೂರಿನಲ್ಲೇ ನಡೆದಿವೆ. ಭಾರತೀಯ ಚಲನಚಿತ್ರರಂಗದ ನಟ, ನಿರ್ದೇಶಕ ದಿಗ್ಗಜರು ಅಲ್ಲಿಗೆ ಬಂದು ಹತ್ತು ದಿನಗಳ ಕಾಲವರೆಗೆ ತಂಗುತ್ತಾರೆ. ಪ್ರಪಂಚದ ಅನೇಕ ಅತ್ಯುತ್ತಮ ಚಿತ್ರಗಳನ್ನು ವೀಕ್ಷಿಸುವ ಅವಕಾಶ ಪ್ರೇಕ್ಷಕರಿಗೆ ಸಿಗುತ್ತದೆ. ಚಲನಚಿತ್ರ ಕ್ಷೇತ್ರದ ಅನೇಕ ಕಾರ್ಯಕ್ರಮಗಳು ನಡೆಯುತ್ತವೆ. ಇವುಗಳಲ್ಲಿ ಭಾಗವಹಿಸಿ ರಸದೌತಣ ಸವಿಯುವ ಭಾಗ್ಯ ಉತ್ತರದವರಿಗೂ ಸಿಗಬೇಕಾದರೆ ಇಲ್ಲಿ ಚಲನಚಿತ್ರೋತ್ಸವ ನಡೆಯಬೇಕು’ ಎಂದು ಹೇಳಿದ್ದಾರೆ.

‘ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಸಲು ಬೇಕಾದ ಸೌಲಭ್ಯಗಳೆಲ್ಲವೂ ಇಲ್ಲಿವೆ. ಸಾಕಷ್ಟು ಚಲನಚಿತ್ರ ಮಂದಿರಗಳಿದ್ದು, ಅವುಗಳನ್ನು ಬಳಸಿಕೊಳ್ಳಬಹುದು. ಉತ್ತಮ ಸಂಪರ್ಕ ವ್ಯವಸ್ಥೆಯೂ ಇದೆ. ಕಿತ್ತೂರು ಕರ್ನಾಟಕದವರೇ ಆಗಿರುವ ಮುಖ್ಯಮಂತ್ರಿ ಹಾಗೂ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಈ ನಿಟ್ಟಿನಲ್ಲಿ ದಿಡ್ಡ ಹೆಜ್ಜೆ ಇಡಬೇಕು’ ಎಂದು ಒತ್ತಾಯಿಸಿದ್ದಾರೆ.

‘ಇಲ್ಲಿನ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಅಧಿವೇಶನದಲ್ಲಿ ಸರ್ಕಾರದ ಗಮನಸೆಳೆಯಬೇಕು. ಒತ್ತಡ ಹೇರಬೇಕು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT