ಮಂಗಳವಾರ, ಜೂನ್ 2, 2020
27 °C

‘ಪಾಪು’ ಹೆಸರಿನಲ್ಲಿ ಪೀಠ, ಸ್ಮಾರಕ ಸ್ಥಾಪಿಸಿ: ಶ್ರದ್ಧಾಜಲಿ ಸಭೆಯಲ್ಲಿ ನಿರ್ಣಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಹಿರಿಯ ಪತ್ರಕರ್ತ, ಕನ್ನಡಪರ ಹೋರಾಟಗಾರ ಡಾ.ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ನಗರದಲ್ಲಿ ಸ್ಮಾರಕ ಸ್ಥಾಪಿಸಬೇಕು’ ಎಂದು ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ನಡೆದ ಕನ್ನಡಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿ ನಿರ್ಣಯ ಕೈಗೊಳ್ಳಲಾಯಿತು.

ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಹಾಗೂ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಸಭೆಯಲ್ಲಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪುಟ್ಟಪ್ಪ ಹೆಸರಿನ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ಆಗ್ರಹಿಸಲಾಯಿತು.

‘ಪುಟ್ಟಪ್ಪ ಬದುಕಿದ್ದಾಗ ಅವರ ಬಗ್ಗೆ ಗೌರವ ತೋರಿಸಲಿಲ್ಲ. ಅವರು ಅಗಲಿದಾಗ ಶೋಕಾಚರಣೆ ಘೋಷಿಸಲಿಲ್ಲ. ಇದು ಖಂಡನೀಯ’ ಎಂದು ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟಗಾರರಾದ ಸಿದ್ದನಗೌಡ ಪಾಟೀಲ, ಅಶೋಕ ಚಂದರಗಿ, ಮಹಾದೇವ ತಳವಾರ, ಆರ್.ಎಸ್. ದರ್ಗೆ ಮಾತನಾಡಿ ಪುಟ್ಟಪ್ಪ ಅವರು ಬೆಳಗಾವಿಗಾಗಿ ಮಾಡಿದ ಸೇವೆಯನ್ನು ಸ್ಮರಿಸಿದರು.

ಮುಖಂಡ ಶಂಕರ ಬಾಗೇವಾಡಿ ಸ್ವಾಗತಿಸಿದರು. ಒಂದು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.