ಶುಕ್ರವಾರ, ಡಿಸೆಂಬರ್ 4, 2020
24 °C

200 ದಿನ ಉದ್ಯೋಗ ನೀಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಒಂದು ಕುಟುಂಬಕ್ಕೆ 200 ದಿನ ಉದ್ಯೋಗ ನೀಡಬೇಕು’ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಂಘಟನೆಯ ಪದಾಧಿಕಾರಿಗಳು, ‘ಖಾತ್ರಿ ಯೋಜನೆಯಲ್ಲಿ ಪ್ರಸ್ತುತ 100 ದಿನಗಳು ಉದ್ಯೋಗ ನೀಡಲಾಗುತ್ತಿದೆ. ಈ ವರ್ಷ ಕೋವಿಡ್ ಲಾಕ್‌ಡೌನ್‌, ನಗರಗಳಿಂದ ವಲಸೆ, ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿರುವುದರಿಂದಾಗಿ ಬಹಳಷ್ಟು ಕುಟುಂಬಗಳು 100 ದಿನಗಳ ಮಾನವ ದಿನಗಳನ್ನು ಮುಗಿಸಿವೆ. ಹೀಗಾಗಿ 200 ದಿನಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

‘ಪಡಿತರ ಚೀಟಿ ಹೊಂದಿರುವವರಿಗೆ ತಲಾ 5 ಕೆ.ಜಿ. ಹೆಚ್ಚುವರಿ ಪಡಿತರವನ್ನು ಇನ್ನೂ 6 ತಿಂಗಳವರೆಗೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.