ಕುರಿಗಾಹಿಗಳ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

ಬೆಳಗಾವಿ: ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕುರಿಗಾಹಿಗಳು ಮತ್ತು ಕುರಿ ಸಾಕಾಣಿಕೆದಾರರ ಸಂಘಗಳು ಮತ್ತು ಸಂಘಗಳ ಮಹಾಮಂಡಳದ ನೇತೃತ್ವದಲ್ಲಿ ಕುರಿಗಾಹಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಕಾಲೇಜು ರಸ್ತೆಯ ಪಶುಸಂಗೋಪನಾ ಇಲಾಖೆ ಕಚೇರಿ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಅವರು, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.
ಕುರಿಗಳು ಸತ್ತರೆ ಪರಿಹಾರ ನೀಡುವ ಯೋಜನೆ ಮುಂದುವರಿಸಬೇಕು. ಕುರಿಗಳಿಗೆ ಔಷಧ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಗೋಮಾಳ ರಕ್ಷಣೆ ಮಾಡಬೇಕು. ಕುರಿಗಳಿಗೆ ನೀರು, ಮೇವು ಹಾಗೂ ವಿಮಾ ಸೌಲಭ್ಯ ಕಲ್ಪಿಸಬೇಕು. ಹಿಂದೆ ಜಾರಿಗೊಳಿಸಿದ್ದ ಈ ಯೋಜನೆಗಳನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳದ ಅಧ್ಯಕ್ಷ ಪಂಡಿತರಾವ್ ಚಿದ್ರಿ ಹಾಗೂ ನಿರ್ದೇಶಕ ಗಜಾನನ ಎನ್. ಕ್ವಳ್ಳಿ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.