ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

200 ದಿನ ಉದ್ಯೋಗಕ್ಕೆ ಆಗ್ರಹ

Last Updated 4 ನವೆಂಬರ್ 2020, 13:39 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವರ್ಷಕ್ಕೆ ಒಂದು ಕುಟುಂಬಕ್ಕೆ 200 ದಿನ ಉದ್ಯೋಗ ನೀಡಬೇಕು’ ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್)ಯವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

‘ಖಾತ್ರಿ ಯೋಜನೆಯಲ್ಲಿ ಪ್ರಸ್ತುತ ಕುಟುಂಬವೊಂದಕ್ಕೆ ವರ್ಷಕ್ಕೆ 100 ದಿನಗಳು ಉದ್ಯೋಗ ನೀಡಲಾಗುತ್ತಿದೆ. ಈ ವರ್ಷ ಕೋವಿಡ್–19 ಲಾಕ್‌ಡೌನ್‌, ನಗರಗಳಿಂದ ವಲಸೆ, ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿರುವುದರಿಂದಾಗಿ ಬಹಳಷ್ಟು ಕುಟುಂಬಗಳು 100 ದಿನಗಳ ಮಾನವ ದಿನಗಳನ್ನು ಈಗಾಗಲೇ ಮುಗಿಸಿವೆ. ಹೀಗಾಗಿ 200 ದಿನಗಳಿಗೆ ವಿಸ್ತರಿಸುವ ಮೂಲಕ ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ಅವರ ಜೀವನ ನಿರ್ವಹಣೆಗೆ ನೆರವಾಗಬೇಕು. ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

‘ಪಡಿತರ ಚೀಟಿ ಹೊಂದಿರುವವರಿಗೆ ತಲಾ 5 ಕೆ.ಜಿ. ಪಡಿತರವನ್ನು ಹೆಚ್ಚುವರಿಯಾಗಿ ಇನ್ನೂ 6 ತಿಂಗಳವರೆಗೆ ನೀಡಬೇಕು’ ಎಂದು ಆಗ್ರಹಿಸಿದರು.

ರಾಣಿ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅವರು, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT