ಬೆಳಗಾವಿ: ‘ತಾಲ್ಲೂಕಿನ ಪೀರನವಾಡಿಯಲ್ಲಿ ಹಾಕಿರುವ ಛತ್ರಪತಿ ಶಿವಾಜಿ ಮಹಾರಾಜ ವೃತ್ತದ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು’ ಎಂದು ಆಗ್ರಹಿಸಿ ಕರವೇ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾ ಯುವ ಘಟಕದ ಅಧ್ಯಕ್ಷ ಆರ್. ಅಭಿಲಾಷ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
‘ಆ ನಾಮಫಲಕ ಮರಾಠಿಮಯವಾಗಿದೆ. ಮರಾಠಿ ಭಾಷೆಗೆ ಆದ್ಯತೆ ನೀಡಿ ಕನ್ನಡವನ್ನು 2ನೇ ಸಾಲಿನಲ್ಲಿ ಬಳಸಲಾಗಿದೆ. ಅದನ್ನು ಜಿಲ್ಲಾಡಳಿತದಿಂದ ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಾವೆ ಅದನ್ನು ತೆಗೆದು ಹಾಕಬೇಕಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.