ಸೋಮವಾರ, ಸೆಪ್ಟೆಂಬರ್ 20, 2021
25 °C

‘ಉತ್ತರ ಕರ್ನಾಟಕದ ಅಭಿವೃದ್ಧಿಗೂ ಆದ್ಯತೆ ಕೊಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಕ್ಕೇರಿ: ‘ಕಾವೇರಿ ಜಲಾನಯನ ಪ್ರದೇಶಕ್ಕೆ ಆದ್ಯತೆ ಕೊಟ್ಟಂತೆ ಕೃಷ್ಣಾ ಜಲಾನಯನ ಪ್ರದೇಶಕ್ಕೂ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದ್ಯತೆ ಕೊಟ್ಟು ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಬೇಕು’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಒತ್ತಾಯಿಸಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಉತ್ತರ ಕರ್ನಾಟಕವು ದಕ್ಷಿಣ ಕರ್ನಾಟಕದಷ್ಟು ಅಭಿವೃದ್ಧಿ ಹೊಂದಿಲ್ಲ. ದಕ್ಷಿಣ ಕರ್ನಾಟಕದ ಅಧಿಕಾರಿಗಳಿಗೆ ಉತ್ತರ ಕರ್ನಾಟಕದೆಡೆ ವರ್ಗಾವಣೆಯಾದರೆ ಬರುವುದೇ ಇಲ್ಲ. ಏನಾದರೂ ಮಾಡಿ ಅಲ್ಲಿಯೆ ಉಳಿಯಲು ಪ್ರಯತ್ನಿಸುತ್ತಾರೆ. ಇದರರ್ಥವನ್ನು ಈ ಭಾಗದ ಎಲ್ಲ ಜನರು ಅರಿತುಕೊಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಬೇಡವಾದಲ್ಲಿ ಇತ್ತ ಎಲ್ಲ ಸೌಲಭ್ಯ ಒದಗಿಸಲು ಮುಂದಾಗಬೇಕು’ ಎಂದರು.

‘ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಂದೆಯವರೂ ಮುಖ್ಯಮಂತ್ರಿ ಆಗಿದ್ದರು. ಈ ಭಾಗದ ಅಭಿವೃದ್ಧಿಗೆ ಅವರ ಕೆಲವೊಂದು ಕನಸುಗಳು ನನಸಾಗಿಲ್ಲ. ಅವುಗಳನ್ನು ಈಡೇರಿಸುವಲ್ಲಿ ಮುಖ್ಯಮಂತ್ರಿ ಮನಸ್ಸು ಮಾಡಬೇಕು’ ಎಂದು ಕೋರಿದರು.

ಪುರಸಭೆ ಅಧ್ಯಕ್ಷ ಅಣ್ಣಾಗೌಡ ಪಾಟೀಲ, ಉಪಾಧ್ಯಕ್ಷ ಆನಂದ ಗಂಧ, ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು