ಶುಕ್ರವಾರ, ಆಗಸ್ಟ್ 19, 2022
27 °C

‘ಲಿಂಗಾಯತ’ ಜಾತಿ ಪ್ರಮಾಣಪತ್ರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಲಿಂಗಾಯತ’ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಕೊಡುವಲ್ಲಿ ಲೋಪದೋಷಗಳು ಉಂಟಾಗುತ್ತಿವೆ. ನಮ್ಮ ಮೂಲ ಜಾತಿ ‘ಲಿಂಗಾಯತ’ ಆಗಿದೆ. ಆದರೆ, ಕಂದಾಯ ಇಲಾಖೆಯಿಂದ ‘ವೀರಶೈವ ಲಿಂಗಾಯತ’ ಎಂದು ನಮೂದಿಸಿ ಪ್ರಮಾಣಪತ್ರ ಕೊಡಲಾಗುತ್ತಿದೆ. ಇದು ನಮಗೆ ಮುಜುಗರ ಉಂಟು ಮಾಡುತ್ತಿದೆ’ ಎಂದು ತಿಳಿಸಿದರು.

‘ಲಿಂಗಾಯತ’ ಎಂದು ನಮೂದಿಸಿದ ಪ್ರಮಾಣಪತ್ರ ನೀಡುವ ಮೂಲಕ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಬಸವ ದಳ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಬಸವರಾಜ, ಲಿಂಗಾಯತ ಧರ್ಮ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಗುಡಸ ಮತ್ತು ಉಪಾಧ್ಯಕ್ಷ ಮಾರಯ್ಯ ಗಡಗಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು