ಭಾನುವಾರ, ಆಗಸ್ಟ್ 9, 2020
22 °C

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ: ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಅವಕಾಶ ನೀಡಬೇಕು’ ಎಂದು ಆಗ್ರಹಿಸಿ ‘ಮಧ್ಯವರ್ತಿ ಸಾರ್ವಜನಿಕ  ಗಣೇಶೋತ್ಸವ ಮಹಾಮಂಡಳ’ದ ಪದಾಧಿಕಾರಿಗಳು ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

‘ಸಾರ್ವಜನಿಕ ಗಣೇಶೋತ್ಸವ ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬಾರದು. ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ವಿಧಿಸುವ ನಿರ್ಬಂಧಗಳನ್ನು ಪಾಲಿಸಿಕೊಂಡು ಉತ್ಸವ ನಡೆಸುವುದಕ್ಕೆ ನಾವು ಬದ್ಧವಾಗಿದ್ದೇವೆ. ಆದರೆ, ಸಂಪೂರ್ಣವಾಗಿ ರದ್ದುಪಡಿಸುವುದು ಸರಿಯಲ್ಲ. ಸಾಂಪ್ರದಾಯಿಕ ಹಾಗೂ ಸರಳವಾಗಿ ಆಚರಿಸಲು ಅನುಮತಿ ಕೊಡಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಅಧ್ಯಕ್ಷ ರಂಜಿತ್ ಪಾಟೀಲ, ಮುಖಂಡ ರಮಾಕಾಂತ ಕೊಂಡುಸ್ಕರ ನೇತೃತ್ವ ವಹಿಸಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು