ಮಂಗಳವಾರ, ಅಕ್ಟೋಬರ್ 26, 2021
21 °C

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ: ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯಲ್ಲಿ ಅತಿಥಿ ಉಪನ್ಯಾಸಕರಿಗೆ ಗೌರವಯುತ ಬದುಕಿನ ಹಕ್ಕು ನೀಡಬೇಕು. ಕೆಲಸ ಕಾಯಂ ಮಾಡಿ ಸೇವಾ ಭದ್ರತೆ ಒದಗಿಸಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶಿವಾನಂದ ಎನ್. ಕಲ್ಲೂರು ಒತ್ತಾಯಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ರಾಜ್ಯದ 421 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,248 ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಕೇವಲ ಗೌರವ ಭತ್ಯೆ ಪಡೆದು ಕೆಲಸ ಮಾಡುತ್ತಿದ್ದಾರೆ. ಇವರಲ್ಲಿ ಸಾವಿರಾರು ಮಂದಿ ವಯೋಮಿತಿ ಮೀರಿದವರು ಅಥವಾ ಮೀರುತ್ತಿರುವವರು ಇದ್ದಾರೆ. ಅಭದ್ರತೆಯಲ್ಲಿ ಜೀವನ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.

‘ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ನೌಕರರನ್ನು ಕಾಯಂ ಮಾಡಿಕೊಂಡಂತೆ ಅತಿಥಿ ಉಪನ್ಯಾಸಕರ ವಿಷಯದಲ್ಲೂ ಸರ್ಕಾರ ದಿಟ್ಟ ಕ್ರಮ ವಹಿಸಬೇಕು. ದೆಹಲಿ ಸರ್ಕಾರ ವಿಶೇಷ ನಿಯಮಾವಳಿ ರೂಪಿಸಿ ಕಾಯಂ ಮಾಡಿಕೊಂಡಿದೆ. ತಮಿಳುನಾಡು, ಹಿಮಾಚಲಪ್ರದೇಶ ಸರ್ಕಾರಗಳು ಕೂಡ ಕ್ರಮ ವಹಿಸಿದೆ. ರೀತಿ ರಾಜ್ಯ ಸರ್ಕಾರವೂ ನಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ನಿಯಮಾವಳಿ ರೂಪಿಸಬೇಕು’ ಎಂದು ಒತ್ತಾಯಿಸಿದರು.

‘ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿದ ಎಲ್ಲ ಅತಿಥಿ ಉಪನ್ಯಾಸಕರಿಗೂ ಅವರವರ ವಿದ್ಯಾರ್ಹತೆಗೆ ಅನುಗುಣವಾಗಿ ಹುದ್ದೆಗಳನ್ನು ನೀಡಿ, ಸೇವಾ ಭದ್ರತೆ ಒದಗಿಸಬೇಕು’ ಎಂದು ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು