ಪರಮಾನಂದವಾಡಿ (ಬೆಳಗಾವಿ ಜಿಲ್ಲೆ): ‘ಶಿಕ್ಷಣ ಇಲಾಖೆಯಲ್ಲಿ ಅವೈಜ್ಞಾನಿಕವಾಗಿ ನೀಡಿದ ಬಡ್ತಿಗೆ ಕಡಿವಾಣ ಹಾಕಿದ ಕೆಎಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ) ಆದೇಶವನ್ನು ಪಾಲಿಸಬೇಕು’ ಎಂದು ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ (ಜಿಪಿಟಿ) ಚಿಕ್ಕೋಡಿ ಜಿಲ್ಲಾ ಘಟಕದವರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅಥಣಿಯಲ್ಲಿ ಈಚೆಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸವದಿ, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.
ತಾಲ್ಲೂಕು ಘಟಕದ ಅಧ್ಯಕ್ಷ ಅಸ್ಲಂ ಮುಲ್ಲಾ, ಗೌರವಾಧ್ಯಕ್ಷ ಅಶೋಕ ಡಾಬಳಿ, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಕೊಣ್ಣೂರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.