ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಣ್ಣ ಪ್ರತಿಮೆ ಸ್ಥಾಪನಗೆ ಆಗ್ರಹಿಸಿ ಪ್ರತಿಭಟನೆ

Last Updated 26 ಆಗಸ್ಟ್ 2020, 11:34 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಕರ್ನಾಟಕ ವಿಶ್ವ ನಿರ್ಮಾಣ ಸೇನೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ರಾಯಣ್ಣನ ಜಯಂತಿಯ ದಿನವಾದ ಆ.15ರಂದು ಅಭಿಮಾನಿಗಳು ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದರು. ತಕ್ಷಣವೇ ಪೊಲೀಸರು ಪ್ರತಿಮೆ ತೆರವುಗೊಳಿಸಿ ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಸ್ವಾತಂತ್ರ್ಯ ಹೋರಾಟಗಾರನನ್ನು ಅವಮಾನಿಸಲಾಗಿದೆ. ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು. ಗೌರವಪೂರ್ವಕವಾಗಿ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ವಡರಟ್ಟಿ, ಮುಖಂಡರಾದ ಬಸವರಾಜ. ಮೈನುದ್ದೀನ್ ಮಕಾನದಾರ ಹಾಗೂ ಸರಸ್ವತಿ ಮಂಜು ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT