ಮಂಗಳವಾರ, ಜೂಲೈ 7, 2020
28 °C

ಆಸ್ತಿ ತೆರಿಗೆ ಹೆಚ್ಚಿಸದಿರಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ನಗರಪಾಲಿಕೆ ವ್ಯಾಪ್ತಿಯಲ್ಲಿ ಈ ವರ್ಷ ಆಸ್ತಿ ತೆರಿಗೆ ಪರಿಷ್ಕರಣೆ ಪ್ರಕ್ರಿಯೆ ನಡೆಸಬಾರದು’ ಎಂದು ಆಗ್ರಹಿಸಿ ನಗರಪಾಲಿಕೆ ಮಾಜಿ ಸದಸ್ಯರ ಸಂಘದವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಕೋವಿಡ್–19 ಲಾಕ್‌ಡೌನ್‌ನಿಂದಾಗಿ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ದುಡಿಮೆ, ಗಳಿಕೆ ಇಲ್ಲದೆ ಕಂಗಾಲಾಗಿದ್ದಾರೆ. ಹೀಗಾಗಿ, ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸುವವರೆಗೂ ಆಸ್ತಿ ತೆರಿಗೆ ಹೆಚ್ಚಿಸಲು ಸರ್ಕಾರ ಮುಂದಾಗಬಾರದು. ಗಾಯದ ಮೇಲೆ ಬರೆ ಎಳೆಯಬಾರದು. ಪರಿಷ್ಕರಣೆಯನ್ನು ಮುಂದಿನ ವರ್ಷಕ್ಕೆ ಮುಂದೂಡಬೇಕು’ ಎಂದು ಒತ್ತಾಯಿಸಿದರು.

ಅಧ್ಯಕ್ಷ ನಾಗೇಶ ಸಾತೇರಿ ಹಾಗೂ ಸದಸ್ಯರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು