ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಂಚಣಿದಾರರ ಸಮಸ್ಯೆ ಪರಿಹರಿಸಲು ಆಗ್ರಹ

Last Updated 25 ಸೆಪ್ಟೆಂಬರ್ 2021, 11:03 IST
ಅಕ್ಷರ ಗಾತ್ರ

ಬೆಳಗಾವಿ: ‘ಇಪಿಎಸ್–95 ಪಿಂಚಣಿದಾರರ ಕ್ಷೇಮಾಭಿವೃದ್ಧಿ ಮಹಾಮಂಡಳ’ದಿಂದ ಮಾಧವಬಾಗ್ ಆಸ್ಪತ್ರೆ ಹಾಗೂ ಜಿಲ್ಲಾ ವೈದ್ಯಕೀಯ ಮಂಡಳಿ ಸಹಯೋಗದಲ್ಲಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ವೈದ್ಯಕೀಯ ಅರಿವು–ನೆರವು ಮತ್ತು ಕೋವಿಡ್-19 ಲಸಿಕಾ ಅಭಿಯಾನವನ್ನು ಶುಕ್ರವಾರ ನಡಸಲಾಯಿತು.

ಸಂಸದೆ ಮಂಗಲಾ ಸುರೇಶ ಅಂಗಡಿ ಚಾಲನೆ ನೀಡಿದರು. ನಂತರ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ದೊರೆಯುವ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಕಾರ್ಮಿಕ ಪಿಂಚಣಿ ಯೋಜನೆ ಪಿಂಚಣಿದಾರರ ಕ್ಷೇಮಾಭಿವೃದ್ಧಿ ಮಹಾಮಂಡಳ ಅಧ್ಯಕ್ಷ ರಾಜಶೇಖರ ಕೋಪರ್ಡೆ, ‘ಇಪಿಎಸ್ ಪಿಂಚಣಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸಂಸರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ನಮಗೆ ಬಿಪಿಎಲ್ ಪಡಿತರ ಚೀಟಿ ವಿತರಿಸುವುದಕ್ಕೂ ಕ್ರಮ ವಹಿಸಬೇಕು’ ಎಂದು ಕೋರಿದರು.

ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು.

ಮಾಧವಭಾಗ್ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಸಾದ್ ದೇಶಪಾಂಡೆ, ಕ್ಷೇಮಾಭಿವೃದ್ಧಿ ಮಹಾಮಂಡಳದ ಪ್ರಧಾನ ಕಾರ್ಯದರ್ಶಿ ಬಿ.ಆರ್. ಲಕ್ಕುಂಡಿಮಠ, ಉಪಾಧ್ಯಕ್ಷ ಎ.ಎಚ್. ಕುಲಕರ್ಣಿ, ಖಜಾಂಚಿ ಎ.ಆರ್. ಹುನಗುಂದ, ಪದಾಧಿಕಾರಿಗಳಾದ ಬಿ.ಎಲ್. ಮಂಟೂರ, ಬಿ.ಎಂ. ಕೋಟಾಲೆ, ಎಸ್.ಎಸ್. ಮಹಾಜನ, ಪಿ.ಆರ್. ಕಾಂಬಳೆ,ಆರ್.ಎಸ್. ಸಾಸನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT