ಗುರುವಾರ , ಅಕ್ಟೋಬರ್ 22, 2020
24 °C

ಮತದಾರರ ಪಟ್ಟಿಯಲ್ಲಿನ ಲೋಪ ಸರಿಪಡಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ತಾಲ್ಲೂಕಿನ ಹಿಂಡಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ರಕ್ಷಕ ಕಾಲೊನಿಯ ನಿವಾಸಿಗಳ ಹೆಸರು ಬೇರೊಂದು ವಾರ್ಡ್‌ನಲ್ಲಿ ಸೇರ್ಪಡೆಯಾಗಿದ್ದು, ಮತದಾರರ ಪಟ್ಟಿಯಲ್ಲಿ ಆಗಿರುವ ಈ ಲೋಪವನ್ನು ಕೂಡಲೇ ಸರಿಪಡಿಸಬೇಕು’ ಎಂದು ಆಗ್ರಹಿಸಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

‘ಹಿಂಡಲಗಾ ಪಂಚಾಯಿತಿಯ 10ನೇ ವಾರ್ಡ್‌ನಲ್ಲಿ ರಕ್ಷಕ ಕಾಲೊನಿಯಲ್ಲಿ ನಾವು ವಾಸಿಸುತ್ತಿದ್ದೇವೆ. ಆದರೆ, ನಮ್ಮ ಹೆಸರುಗಳು ಬೇರೆ ವಾರ್ಡ್‌ಗಳ ಪಟ್ಟಿಯಲ್ಲಿ ಸೇರಿವೆ. ಇದರಿಂದ ಗೊಂದಲ ಉಂಟಾಗುತ್ತಿದೆ. ಕೂಡಲೇ ಇತ್ತ ಗಮನಹರಿಸಬೇಕು’ ಎಂದು ಒತ್ತಾಯಿಸಿದರು.

‘ವಾರ್ಡ್‌ಗಳ ವಿಂಗಡಣೆ ಅವೈಜ್ಞಾನಿಕವಾಗಿದ್ದು, ಅದನ್ನೂ ಸರಿಪಡಿಸಬೇಕು’ ಎಂದು ಕೋರಿದರು.

ಸ್ಥಳೀಯರಾದ ಭರಮಣ್ಣ ಪಾಟೀಲ, ಡಿ.ಬಿ. ಪಾಟೀಲ, ನಾಮದೇವ ರೇಡೆಕರ, ಎಚ್. ಅರುಣ್, ಕೆ. ರೋಷನ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು