ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನತ ಕಚೇರಿಗಳು ಸ್ಥಳಾಂತರಗೊಳ್ಳದಿದ್ದರೆ ಪ್ರತ್ಯೇಕ ರಾಜ್ಯದ ಹೋರಾಟ ಅನಿವಾರ್ಯ

Last Updated 19 ಸೆಪ್ಟೆಂಬರ್ 2020, 11:30 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಂಗಳೂರಿನಲ್ಲಿರುವ ಸರ್ಕಾರದ ಉನ್ನತ ಮಟ್ಟದ ಕಚೇರಿಗಳನ್ನು ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು. ಇಲ್ಲವಾದಲ್ಲಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವಂತೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ’ ಎಂದು ಧಾರವಾಡದ ವಕೀಲ ಬಿ.ಡಿ. ಹಿರೇಮಠ ತಿಳಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಶನಿವಾರ ಮನವಿ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಸುವರ್ಣ ವಿಧಾನಸೌಧ ನಿರ್ಮಾಣವಾದ ನಂತರ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ ಎಂದು ಭಾವಿಸಿದ್ದೆವು. ನಾವು 2ನೇ ದರ್ಜೆ ಜನರಲ್ಲ ಎಂದು ತಿಳಿದಿದ್ದೆವು. ಆದರೆ, ನಿರೀಕ್ಷೆ ಹುಸಿಯಾಗಿದೆ. ಎಂಟು ವರ್ಷಗಳಿಂದಲೂ ಈ ಸೌಧವನ್ನು ಖಾಲಿ ಬಿಡಲಾಗಿದೆ. ರಾಜ್ಯಮಟ್ಟದ ಕಚೇರಿಗಳ ಬದಲಿಗೆ ಧಾರವಾಡ, ಹುಬ್ಬಳ್ಳಿಯಲ್ಲಿರುವ ಸಣ್ಣಪುಟ್ಟ ಕಚೇರಿಗಳನ್ನು ಸ್ಥಳಾಂತರಿಸುವುದಕ್ಕೆ ನಮ್ಮ ವಿರೋಧವಿದೆ. ಈ ನಿಟ್ಟಿನಲ್ಲಿ ನ್ಯಾಯಕ್ಕಾಗಿ ಹೋರಾಟ ಮುಂದುವರಿಸಲಾಗುವುದು’ ಎಂದರು.

‘ರಾಜ್ಯವನ್ನು ಎರಡು ಭಾಗ ಮಾಡುವುದು ನಮಗೂ ಇಷ್ಟವಿಲ್ಲ. ಆದರೆ, ಸರ್ಕಾರವು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸ್ಪಂದಿಸದಿದ್ದಲ್ಲಿ ಹೋರಾಟ ಪ್ರಾರಂಭ ಮಾಡಬೇಕಾಗುತ್ತದೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಈ ಬಾರಿಯ ವಿಧಾನಮಂಡಲ ಅಧಿವೇಶನದಲ್ಲೇ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT