ರಾಜ್ಯ ಗ್ರಾಹಕರ ವ್ಯಾಜ್ಯಗಳ ಆಯೋಗದ ಪೀಠ ಸ್ಥಾಪನೆಗೆ ಆಗ್ರಹ

ಬೆಳಗಾವಿ: ‘ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಪೀಠವನ್ನು ಸ್ಥಾಪಿಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿ ಜಿಲ್ಲಾ ಗ್ರಾಹಕರ ಸಂಘ ಮತ್ತು ವಕೀಲರ ಸಂಘದವರು ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
‘ಉತ್ತರ ಕರ್ನಾಟಕದ ಜನರ ಹಿತದೃಷ್ಟಿಯಿಂದ ಜಿಲ್ಲಾ ಕೇಂದ್ರದಲ್ಲಿ ಪೀಠವನ್ನು ಸ್ಥಾಪಿಸುವ ಸಲುವಾಗಿ ತಾತ್ಕಾಲಿಕವಾಗಿ ಸುವರ್ಣ ವಿಧಾನಸೌಧದಲ್ಲಿ ಸ್ಥಳಾವಕಾಶ ನಿಗದಿಪಡಿಸಬೇಕು ಮತ್ತು ಪೀಠೋಪಕರಣ ವ್ಯವಸ್ಥೆ ಕಲ್ಪಿಸಿಕೊಡಬೇಕು’ ಎಂದು ಕೋರಿದರು.
ಇಲ್ಲಿನ ವಕೀಲರ ಸಂಘದ ಉಪಾಧ್ಯಕ್ಷರಾದ ಗಜಾನನ ಕೆ. ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಆರ್.ಸಿ. ಪಾಟೀಲ, ವಕೀಲ ಮತ್ತು ಜಿಲ್ಲಾ ಗ್ರಾಹಕರ ಸಂಘದ ಅಧ್ಯಕ್ಷ ಎನ್.ಆರ್. ಲಾತೂರ, ಉಪಾಧ್ಯಕ್ಷ ಜಿ.ಎ. ಹಿರೇಮಠ, ವಕೀಲರಾದ ಚಂದ್ರಕಾಂತ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.