ಹುಕ್ಕೇರಿ: ತಾಲ್ಲೂಕಾದ್ಯಂತ ಅಕ್ರಮ ಗೋವು ಸಾಗಾಟ ನಡೆದಿದ್ದು, ತಕ್ಷಣ ಪೊಲೀಸರು ಅದನ್ನು ತಡೆಗಟ್ಟಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಘಟಕದ ಪದಾಧಿಕಾರಿಗಳು ಶನಿವಾರ ಪೊಲೀಸ್ ಇಲಾಖೆಗೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಜೂ.7 ರಂದು ಬಕ್ರೀದ್ ಇರುವುದರಿಂದ ತಾಲ್ಲೂಕಿನ ವಿವಿಧೆಡೆ ಕಸಾಯಿಖಾನೆಯಲ್ಲಿ ಗೋವುಗಳನ್ನು ಸಂಗ್ರಹಿಸುವ ಕೆಲಸ ನಡೆದಿದೆ ಎಂದು ಕಂಡು ಬಂದಿದ್ದು, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಇದ್ದರೂ ಕೂಡಾ ಗೋವು ಸಾಗಾಟ, ನಿರಂತರ ಹಿಂಸೆ, ಹತ್ಯೆ ನಡೆಯುತ್ತಿರುವುದು ಖಂಡನೀಯ ಎಂದು ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ತಕ್ಷಣ ಪೊಲೀಸರು ಕಾನೂನು ರೀತಿ ಕ್ರಮ ಕೈಗೊಂಡು ಗೋವುಗಳ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದರು.

ವಿಶ್ವ ಹಿಂದೂ ಪರಿಷತ್ ಘಟಕದ ಅಧ್ಯಕ್ಷ ಶಿವರಾಜ ನಾಯಿಕ, ದುರ್ಗಾ ವಾಹಿನಿ ಘಟಕದ ಅಧ್ಯಕ್ಷೆ ಕಾವೇರಿ ಪೂಜೇರಿ, ಬಜರಂಗ ದಳ ಜಿಲ್ಲಾ ಸಂಯೋಜಕ ಲಕ್ಷ್ಮಣ ಯಡ್ರಾಂವಿ, ತಾಲ್ಲೂಕು ಸಂಯೋಜಕ ಆಕಾಶ ಖನಾಯಿ, ಸಂಕೇಶ್ವರ ಘಟಕದ ಜಯಂತ ಸಾವಂತ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.