ಗುರುವಾರ , ಮಾರ್ಚ್ 30, 2023
24 °C

ಆಸ್ಪತ್ರೆ ಅಭಿವೃದ್ಧಿಗೆ ಆಗ್ರಹಿಸಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಣಬರ್ಗಿ: ‘ಬೆಳಗಾವಿ ಹೊರವಲಯದ ಕಣಬರ್ಗಿ ಬಸ್‌ ನಿಲ್ದಾಣ ಸಮೀಪವಿರುವ ಮಹಾನಗರ ಪಾಲಿಕೆಯ ಆಸ್ಪತ್ರೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿಪಡಿಸಬೇಕು’ ಎಂದು ಆಗ್ರಹಿಸಿ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮುರುಗೇಂದ್ರಗೌಡ ಪಾಟೀಲ ನೇತೃತ್ವದಲ್ಲಿ ಮುಖಂಡರು ಸಂಸದೆ ಮಂಗಲಾ ಅಂಗಡಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

‘ಕಟ್ಟಡವು ಶಿಥಿಲಗೊಂಡಿದ್ದು, ಸೋರುತ್ತಿದೆ. ಕಿಟಕಿಗಳು ಮುರಿದಿದ್ದು ಉಪಯೋಗಕ್ಕೆ ಬಾರದಂತಿದೆ. ನಿತ್ಯವೂ ಅಲ್ಲಿಗೆ ವೈದ್ಯರು ಕೂಡ ಬರುತ್ತಿಲ್ಲ. ರೋಗಿಗಳಿಗೆ ಸರಿಯಾದ ಹಾಸಿಗೆ ವ್ಯವಸ್ಥೆಯೂ ಇಲ್ಲ. ಹೀಗಾಗಿ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅನುದಾನ ಒದಗಿಸಿ 25 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು. ಕಾಯಂ ವೈದ್ಯರನ್ನು ನೇಮಿಸಬೇಕು. ಈ ಮೂಲಕ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಕೆ.ಜಿ. ಸುಳಗೇಪಾಟೀಲ, ಪುಂಡಲೀಕ ಮಾಲಾಯಿ, ಜ್ಯೋತಿಬಾ ಶಹಪೂರಕರ, ಗುಂಡು ಕಡೆಮನಿ, ಸತೀಶ ಕರವಿನಕೊಪ್ಪ, ಆದಿತ್ಯ ಜೋಶಿ ಹಾಗೂ ಮಾರುತಿ ಜಾನಯಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು