ಶುಕ್ರವಾರ, ಫೆಬ್ರವರಿ 21, 2020
18 °C

ಶಿಕ್ಷಣ ಸಾಲ ಮನ್ನಾಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿರುವುದರಿಂದಾಗಿ, ವಿದ್ಯಾರ್ಥಿಗಳು ಪಡೆದಿರುವ ಶಿಕ್ಷಣ ಸಾಲ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ಶಿಕ್ಷಣ ಸಾಲ ಪಡೆದು ವಿವಿಧ ಕೋರ್ಸ್‌ಗಳನ್ನು ಮುಗಿಸಿರುವ ಯುವಜನರು ಉದ್ಯೋಗ ಸಿಗದೇ ಪರದಾಡುತ್ತಿದ್ದಾರೆ. ನಗರಗಳಲ್ಲಿ ಕೆಲಸಗಳಿಗಾಗಿ ಅಲೆದಾಡುತ್ತಿದ್ದಾರೆ. ಕೆಲವರು ಸಾಲ ತೀರಿಸಲು ಸಾಧ್ಯವಾಗದೇ ಬದುಕಿಗೆ ಶರಣು ಹೇಳುತ್ತಿರುವುದು ದುರಂತಗಳೂ ನಡೆಯುತ್ತಿವೆ. ಹೀಗಾಗಿ, ಅವರಿಗೆ ಸರ್ಕಾರ ಸ್ಪಂದಿಸಬೇಕು. ಶಿಕ್ಷಣ ಸಾಲ ಮನ್ನಾ ಮಾಡುವುದರೊಂದಿಗೆ, ನಿರುದ್ಯೋಗ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.

ಅಧ್ಯಕ್ಷ ಅಪ್ಪಾಸಾಬ ದೇಸಾಯಿ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು