ವೇತನ ಹೆಚ್ಚಳಕ್ಕೆ ಹಟ್ಟಿ ಗಣಿ ಕಾರ್ಮಿಕರ ಆಗ್ರಹ

7

ವೇತನ ಹೆಚ್ಚಳಕ್ಕೆ ಹಟ್ಟಿ ಗಣಿ ಕಾರ್ಮಿಕರ ಆಗ್ರಹ

Published:
Updated:
Deccan Herald

ಬೆಳಗಾವಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಸದಸ್ಯರು ಬುಧವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.

‘ಲಾಭದಾಯಕ ಉದ್ಯಮವಾದ ಹಟ್ಟಿ ಚಿನ್ನದ ಗಣಿಯಲ್ಲಿ 4056 ಜನ ಕಾರ್ಮಿಕರು ಹಾಗೂ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. 2016ರಿಂದ ಈವರೆಗೆ ಕಾರ್ಮಿಕರ ವೇತನ ಹೆಚ್ಚಳ ಮಾಡಿಲ್ಲ. ಹಳೇ ವೇತನದ ಒಂಪ್ಪದ 2016ರಲ್ಲಿ ಮುಕ್ತಾಯವಾಗಿದ್ದರೂ ಪರಿಷ್ಕರಣೆಗೆ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.

‘ಸರ್ಕಾರ ತಕ್ಷಣ ಎಲ್ಲ ಕಾರ್ಮಿಕರ ಹಾಗೂ ಸಿಬ್ಬಂದಿ ವೇತನ ಹೆಚ್ಚಳ ಮಾಡಬೇಕು. ಗುಂಜನಕೃಷ್ಣ ನೇತೃತ್ವದ ಸಮಿತಿ ವರದಿ ಶಿಪಾರಸ್ಸುಗಳನ್ನು ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ವಾಲೇಬಾಬು, ಪ್ರಧಾನ ಕಾರ್ಯದರ್ಶಿ ಎಂ.ಡಿ. ಅಮೀರ ಅಲಿ, ಆರ್. ಮಾನಸಯ್ಯ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !