ಉತ್ತರ ಕರ್ನಾಟಕ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ: ಶಾಸಕ ಎ.ಎಸ್. ಪಾಟೀಲ ನಡಹಳ್ಳಿ

7

ಉತ್ತರ ಕರ್ನಾಟಕ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ: ಶಾಸಕ ಎ.ಎಸ್. ಪಾಟೀಲ ನಡಹಳ್ಳಿ

Published:
Updated:

ಬೆಳಗಾವಿ: ‘ಉತ್ತರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಒತ್ತಾಯಿಸಿದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಸದಸ್ಯರು ಸುವರ್ಣ ವಿಧಾನಸೌಧದ ಬಳಿ ನಡೆಸಿದ ಪ್ರತಿಭಟನೆಗೆ ಬಂದಿದ್ದ ಅವರು ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ನಾನೂ ಹೋರಾಡಿದ್ದೇನೆ. ಅನ್ಯಾಯದ ಕುರಿತು ದಾಖಲಾತಿಗಳನ್ನು ಸಲ್ಲಿಸಿದ್ದೇನೆ. ಆಗ, ನನ್ನನ್ನು ನಾಡದ್ರೋಹಿ ಎಂದು ಕಾಂಗ್ರೆಸ್ ಬಿಂಬಿಸಿತ್ತು. ಈಗ ಎಸ್.ಆರ್. ಪಾಟೀಲ, ಎಂ.ಬಿ. ಪಾಟೀಲ ಮತ್ತು ಜಾರಕಿಹೊಳಿ‌ ಸಹೋದರರು ಈ ಭಾಗಕ್ಕೆ ಆಗಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಅವರನ್ನು ಪಕ್ಷದಿಂದ ಹೊರಹಾಕುತ್ತೀರಾ?’ ಎಂದು ಕೇಳಿದರು.

‘ಪ್ರತ್ಯೇಕ ರಾಜ್ಯವನ್ನು ಜನ ಕೇಳುತ್ತಾರೋ, ಬಿಡುತ್ತಾರೋ? ಆದರೂ ನಮ್ಮ ಸರ್ಕಾರ ಮಾಡಲು ಹೊರಟಿದೆ’ ಎಂದು ಮಾರ್ಮಿಕವಾಗಿ ಹೇಳಿದರು.

‘ಈ ಭಾಗದ ಅಭಿವೃದ್ಧಿ ಕುರಿತು ಸಮರ್ಪಕ ಚರ್ಚೆಗೆ ಸರ್ಕಾರ ಅವಕಾಶ ನೀಡುತ್ತಿಲ್ಲ. ಇದೇ ರೀತಿ ಮುಂದುವರಿದರೆ ಪ್ರತ್ಯೇಕ ರಾಜ್ಯ ಅನಿವಾರ್ಯ ಎನ್ನುವ ಕೂಗು ಜಾಸ್ತಿಯಾಗಬಹುದು. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ನಾನು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಪರ ಇಲ್ಲ. ಆದರೆ, ಅಭಿವೃದ್ಧಿಯಾಗಬೇಕು ಎಂದು ಆಗ್ರಹಿಸುತ್ತೇನೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !