ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ಒತ್ತಾಯ

7

ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ಒತ್ತಾಯ

Published:
Updated:
Deccan Herald

ಬೆಳಗಾವಿ: ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಶ್ರೀರಾಮ ಸೇನೆಯ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಘಟಕದ ಅಧ್ಯಕ್ಷ ವಿಕ್ರಮ ಬಣಗೆ ಮಾತನಾಡಿ, ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪೌರತ್ವ ನೋಂದಣಿ ಅಭಿಯಾನದಲ್ಲಿ ಬಾಂಗ್ಲಾ ದೇಶಿಗರು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ. 40 ಲಕ್ಷಕ್ಕೂ ಹೆಚ್ಚು ಜನರು ವಾಸವಾಗಿದ್ದು, ಇವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಅಕ್ರಮ ವಲಸಿಗರು ದೇಶದ ಆಂತರಿಕ ಭದ್ರತೆಗೆ ಆತಂಕ ತಂದೊಡ್ಡಿದ್ದಾರೆ. ಕೇವಲ ಪಶ್ಚಿಮ ಬಂಗಾಳವಲ್ಲ, ಇತರ ರಾಜ್ಯಗಳಲ್ಲೂ ಅವರು ನುಸುಳಿರುವ ಸಾಧ್ಯತೆ ಇದೆ. ದೇಶದಾದ್ಯಂತ ಇಂತಹ ಸಮೀಕ್ಷೆ ನಡೆಸಿ, ಅಕ್ರಮ ವಲಸಿಗರನ್ನು ಪತ್ತೆ ಹಚ್ಚಬೇಕಾಗಿದೆ. ಇವರನ್ನು ಪತ್ತೆ ಹಚ್ಚಿ ದೇಶದಿಂದ ಹೊರಹಾಕಬೇಕಾಗಿದೆ ಎಂದು ಆಗ್ರಹಿಸಿದರು.

ನಿತಿನ್‌ ಚೌಗುಲೆ, ಮಹೇಶ ಪೂಜಾರಿ, ವಿನಯ ಅಂಗ್ರೊಳ್ಳಿ, ರಾಜು ಕಾಂಬಳೆ, ಶ್ರೀಧರ ತಳವಾರ, ಪವನ ರೆಡೆಕರ, ಬಸವರಾಜ ಅಗಸರ, ಸುಜೀತ ಪಾಟೀಲ ಭಾಗವಹಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !