ಬುಧವಾರ, ಸೆಪ್ಟೆಂಬರ್ 22, 2021
24 °C

ಅತಿವೃಷ್ಟಿಯಿಂದ ಹಾನಿ: ಜಿಲ್ಲಾಧಿಕಾರಿಯಿಂದ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇತ್ತೀಚೆಗೆ ಸುರಿದ ವ್ಯಾಪಕ ‌ಮಳೆಯಿಂದಾಗಿ ಖಾನಾಪುರದಲ್ಲಿ ಹಾನಿಗೊಳಗಾಗಿರುವ ರಸ್ತೆ, ಸೇತುವೆಯನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಪರಿಶೀಲಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಲಪ್ರಭಾ ನದಿ ಹಾಗೂ ಸಮೀಪದ ಹಳ್ಳದ ನೀರಿನಿಂದ ಪೊಲೀಸ್ ತರಬೇತಿ ಶಾಲೆ ಜಲಾವೃತಗೊಂಡಿರುವುದನ್ನು ವೀಕ್ಷಿಸಿದರು. ರಾಮನಗರ-ಲೋಂಡಾ ರಸ್ತೆ ತೀವ್ರ ಹಾನಿಗೊಳಗಾಗಿರುವ ಕುರಿತು ತಹಶೀಲ್ದಾರ್‌ರಿಂದ ಮಾಹಿತಿ ಪಡೆದರು. ದುರಸ್ತಿಗೆ ಕೂಡಲೆ ಕ್ರಮ ವಹಿಸುವಂತೆ ಹೆದ್ದಾರಿ ವಿಭಾಗದ ಯೋಜನಾ ನಿರ್ದೇಶಕರಿಗೆ ಮೊಬೈಲ್‌ ಫೋನ್‌ನಲ್ಲಿ ಸೂಚಿಸಿದರು.

ಖಾನಾಪುರ ತಹಶೀಲ್ದಾರ್‌ ರೇಷ್ಮಾ ತಾಳಿಕೋಟಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು