ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಈಚೆಗೆ ನಡೆದ ವಿಧಾನಮಂಡಲ ಚಳಿಗಾಲದ ಅಧಿವೇಶನದ ವೇಳೆ, ಮಂಡಿ ನೋವಿಗೆ ನಾಟಿ ವೈದ್ಯರಿಂದ ಚಿಕಿತ್ಸೆ ಪಡೆದಿರುವ ಫೋಟೊಗಳು ಹಾಗೂ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸೋಮವಾರ ವೈರಲ್ ಆಗಿವೆ.

ಮೈಸೂರು ಮೂಲದವರು ಎನ್ನಲಾದ ನಾಟಿ ವೈದ್ಯ ಲೋಕೇಶ್ ಟೇಕಲ್ ಎನ್ನುವವರಿಂದ 10 ದಿನಗಳವರೆಗೆ ಚಿಕಿತ್ಸೆ ಪಡೆದಿದ್ದಾರೆ. ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮುಖ್ಯಮಂತ್ರಿಯು ತಾಲ್ಲೂಕಿನ ಮಚ್ಚೆ ಹೊರವಲಯದಲ್ಲಿರುವ ವಿಟಿಯು ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಆಗ, ಚಿಕಿತ್ಸೆ ಪಡೆದಿದ್ದಾರೆ. ಇನ್ನೂ ಒಂದು ತಿಂಗಳವರೆಗೆ ವನಸ್ಪತಿ ಔಷಧಿ ಬಳಸುವ ಪದ್ಧತಿಯ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚರ್ಮದ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು, ನಾಟಿ ವೈದ್ಯ ಲೋಕೇಶ ಅವರನ್ನು ಮುಖ್ಯಮಂತ್ರಿಗೆ ಪರಿಚಯಿಸಿದ್ದರು ಎನ್ನಲಾಗಿದೆ.

‘ಮಂಡಿ ನೋವಿನ ಕಾರಣಕ್ಕೆ ಬೊಮ್ಮಾಯಿ ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುತ್ತಾರೆ, ಚಿಕಿತ್ಸೆ ಹಾಗೂ ಗುಣಮುಖವಾಗಲು ಬಹಳ ಸಮಯ ಬೇಕಾಗಿರುವುದರಿಂದ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ’ ಎಂಬ ವದಂತಿಗಳು ಹಬ್ಬಿದ್ದವು. ಇದನ್ನು ಶಾಸಕ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಆರ್. ಅಶೋಕ್ ತಳ್ಳಿ ಹಾಕಿದ್ದರು. ‘ಮುಖ್ಯಮಂತ್ರಿ ಇಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ; ವಿದೇಶಕ್ಕೆ ಹೋಗುವುದಿಲ್ಲ’ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.