ಚಿಕ್ಕೋಡಿ: ‘ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗೆಲ್ಲಿಸಿ. ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ನಿರೀಕ್ಷಿಸಿ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ತಾಲ್ಲೂಕಿನ ಖಡಕಲಾಟ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಹಮ್ಮಿಕೊಂಡ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಜಾಗತಿಕ ಮಟ್ಟದಲ್ಲಿ ಭಾರತವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾದರೆ ಮತ್ತೊಮ್ಮೆ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಕಳೆದ 10 ವರ್ಷಗಳಲ್ಲಿ ಮೋದಿ ಅವರು ಹಲವಾರು ಯೋಜನೆಗಳು ಜಾರಿಗೆ ತಂದಿದ್ದು, ಅವುಗಳನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯ ಕಾರ್ಯಕರ್ತರಿಂದ ಆಗಬೇಕು’ ಎಂದರು.

ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ‘ನರೇಂದ್ರ ಮೋದಿ ಅವರು ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಭಾರತದ ಅಭ್ಯುದಯಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಅವರನ್ನು 3ನೇ ಅವಧಿಗೆ ಪ್ರಧಾನಿ ಆಗಿಸಲು ಹಾಗೂ ಚಿಕ್ಕೋಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನನ್ನನ್ನು ಬೆಂಬಲಿಸಿ, ಪ್ರಚಂಡ ಬಹುಮತಗಳಿಂದ ಗೆಲ್ಲಿಸಿ’ ಎಂದು ಮನವಿ ಮಾಡಿದರು.

ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಅಪ್ಪಾಜಿಗೊಳ, ವಿಶ್ವನಾಥ ಕಮತೆ, ಎನ್.ಜಿ. ಪಾಟೀಲ, ಪ್ರಲ್ಹಾದ್ ಪಾಟೀಲ, ಕಾಶಿನಾಥ ಕಮತೆ, ರಾವಸಾಬ ಝಿಪರೆ, ವಿನಾಯಕ ಪಾಟೀಲ, ಪವನ ಮಹಾಜನ, ಉಮೇಶ ಘಾಟಗೆ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.