ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತರ ದಂಡು

ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶದ ಸದುಪಯೋಗ
Published 18 ಜೂನ್ 2023, 20:51 IST
Last Updated 18 ಜೂನ್ 2023, 20:51 IST
ಅಕ್ಷರ ಗಾತ್ರ

ಉಗರಗೋಳ(ಬೆಳಗಾವಿ ಜಿಲ್ಲೆ): ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ತ ಭಾನುವಾರ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಅವರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚಿತ್ತು.

ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಯಲ್ಲಮ್ಮನ ಸನ್ನಿಧಿಗೆ ಬಂದಿಳಿದರು. ಯಲ್ಲಮ್ಮನಗುಡ್ಡ ಮಾರ್ಗವಾಗಿ ಸಂಚರಿಸುವ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕಿದವು.

‘ಶಕ್ತಿ ಯೋಜನೆಯಡಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಕೊಟ್ಟಿದ್ದಕ್ಕೆ ಯಲ್ಲಮ್ಮನಗುಡ್ಡಕ್ಕೆ ಬಂದಿದ್ದೇವೆ. ಶಕ್ತಿದೇವತೆ ದರ್ಶನ ಪಡೆಯಲು ಶಕ್ತಿ ಯೋಜನೆ ನೆರವಾಗಿದೆ’ ಎಂದು ಕಲಬುರಗಿಯ ಜೋಗತಿ ದೇವಮ್ಮ ಹೇಳಿದರು.

ಬೆಳಗಾವಿ ತಾಲ್ಲೂಕಿನ ಸುಳೇಭಾವಿಯ ಮಹಾಲಕ್ಷ್ಮಿ ದೇವಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದರು. ಬೈಲಹೊಂಗಲದಿಂದ ಧರ್ಮಸ್ಥಳ, ಉಳವಿ, ಸೊಗಲ ಮತ್ತಿತರ ಧಾರ್ಮಿಕ ಸ್ಥಳಗಳಿಗೆ ಹೆಚ್ಚಿನ ಪ್ರಯಾಣಿಕರು ತೆರಳಿದರು.

ಕೊಟ್ಟೂರೇಶ್ವರನ ಸನ್ನಿಧಿಯಲ್ಲಿ ಮಹಿಳೆಯರು...

ಕೊಟ್ಟೂರು ವರದಿ: ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಪಟ್ಟಣದ ಕೊಟ್ಟೂರೇಶ್ವರ ಸ್ವಾಮಿಯ ದರ್ಶನಕ್ಕೆ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು.

ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಮಹಿಳಾ ಭಕ್ತರ ದಂಡು ತಮ್ಮ ಮಕ್ಕಳೊಂದಿಗೆ ದೇವಸ್ಥಾನಕ್ಕೆ ಬಂದಿದ್ದು ಕಂಡು ಬಂತು. ಈ ಹಿಂದೆ ರಥೋತ್ಸವ ಹಾಗೂ ಕಾರ್ತಿಕೋತ್ಸವ ಸಂದರ್ಭದಲ್ಲಿ ಮಾತ್ರ ಮಹಿಳಾ ಭಕ್ತರ ಸಂಖ್ಯೆ ಗಣನೀಯವಾಗಿರುತ್ತಿತ್ತು. 

ಬಡಿಗೆ ಹಿಡಿದು ನಿಂತ ನಿರ್ವಾಹಕ...

ತೇರದಾಳ (ಬಾಗಲಕೋಟೆ ಜಿಲ್ಲೆ): ಸರ್ಕಾರದ ಉಚಿತ ಬಸ್ ಪ್ರಯಾಣ ‘ಶಕ್ತಿ’ಯನ್ನು ಬಳಸಿಕೊಂಡ ಮಹಿಳೆಯರು ಪಟ್ಟಣದ ಬಸ್ ನಿಲ್ದಾಣದಿಂದ ದೇವರ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ತೆರಳಿದರು. ಮಧ್ಯಾಹ್ನದ ಹೊತ್ತಿಗೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾದ್ದರಿಂದ ಮಹಿಳಾ ಪ್ರಯಾಣಿಕರ ಗದ್ದಲ ನಿಯಂತ್ರಿಸಲು ನಿರ್ವಾಹಕ ಕೆಲ ಕಾಲ ಬಡಿಗೆ ಹಿಡಿದು ನಿಲ್ಲಬೇಕಾಯಿತು. ಅಲ್ಲದೇ ಗೃಹರಕ್ಷಕ ದಳದ ಸಿಬ್ಬಂದಿ ಸಹಾಯವನ್ನೂ ಪಡೆಯಬೇಕಾಯಿತು.

ಯಲ್ಲಮ್ಮನಗುಡ್ಡದಲ್ಲಿ ಭಾನುವಾರ ಸಾರಿಗೆ ಸಂಸ್ಥೆಯ ಬಸ್‌ ಏರಲು ಭಕ್ತರು ಪರದಾಡುತ್ತಿರುವುದು
ಯಲ್ಲಮ್ಮನಗುಡ್ಡದಲ್ಲಿ ಭಾನುವಾರ ಸಾರಿಗೆ ಸಂಸ್ಥೆಯ ಬಸ್‌ ಏರಲು ಭಕ್ತರು ಪರದಾಡುತ್ತಿರುವುದು
ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡಕ್ಕೆ ಭಾನುವಾರ ಭಕ್ತರು ಭೇಟಿ ನೀಡಿ ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದರು
ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡಕ್ಕೆ ಭಾನುವಾರ ಭಕ್ತರು ಭೇಟಿ ನೀಡಿ ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT