‘ರಾಮಚಂದ್ರ ರಾವ್ ವಿರುದ್ಧ ಕಠಿಣ ಕ್ರಮ’
ನಂದಗಡ (ಬೆಳಗಾವಿ ಜಿಲ್ಲೆ): ‘ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣ ನನಗೆ ಗೊತ್ತಾಗಿದೆ. ವಿಚಾರಣೆ ನಡೆಸಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಎಷ್ಟೇ ದೊಡ್ಡ ಅಧಿಕಾರಿ ಆದರೂ ಕಾನೂನಿಗಿಂತ ದೊಡ್ಡವರಲ್ಲ. ಕಾನೂನುಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.