ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಕ ಒಂದು ಪೆಗ್ ಹೆಚ್ಚು ಕುಡಿಬೇಕಾಗುತ್ತೆ: ಹೆಬ್ಬಾಳಕರರನ್ನು ಮೂದಲಿಸಿದ ಸಂಜಯ್

Published 13 ಏಪ್ರಿಲ್ 2024, 14:36 IST
Last Updated 13 ಏಪ್ರಿಲ್ 2024, 14:36 IST
ಅಕ್ಷರ ಗಾತ್ರ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಗೆ ಸಿಕ್ಕ ಬೆಂಬಲ ನೋಡಿದರೆ ‘ಅಕ್ಕ’ ನಿದ್ದೆಗೆಡುತ್ತಾರೆ. ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ‘ಪೆಗ್‌’ ಹೆಚ್ಚುವರಿ ಕುಡಿಯಬೇಕು’ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೆಸರು ಹೇಳದೇ ಮೂದಲಿಸಿದರು. ಹಿಂಡಲಗಾದಲ್ಲಿ ಶನಿವಾರ ನಡೆದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ’ ಎಂದರು. ‘ಮಹಿಳಾ ಕುಲಕ್ಕೆ ಬಿಜೆಪಿ ನೀಡುವ ಗೌರವ ಇದೇನಾ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿಡಿಯೊ ಹೇಳಿಕೆ ಮೂಲಕ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT