ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಲ್ಲಿ ಹೊಸ ವೈರಾಣು: ಪರಿಸ್ಥಿತಿ ನಿಭಾಯಿಸಲು ಸಿದ್ಧ- ದಿನೇಶ್‌ ಗುಂಡೂರಾವ್‌

Published 5 ಡಿಸೆಂಬರ್ 2023, 15:27 IST
Last Updated 5 ಡಿಸೆಂಬರ್ 2023, 15:27 IST
ಅಕ್ಷರ ಗಾತ್ರ

ಬೆಳಗಾವಿ: ‘ಚೀನಾದಲ್ಲಿ ಹರಡಿರುವ ಹೊಸ ವೈರಾಣು ಬಗ್ಗೆ ಭಯ ಪಡಬೇಕಿಲ್ಲ. ರಾಜ್ಯದಲ್ಲಿ ಅಂಥ ಪ್ರಕರಣ ಕಂಡುಬಂದಿಲ್ಲ. ಈ ಸಂಬಂಧ ಆರೋಗ್ಯ ಇಲಾಖೆ ಮತ್ತು ತಜ್ಞರ ಸಭೆ ಕೂಡ ನಡೆಸಿದ್ದೇವೆ. ಎಚ್ಚರಿಕೆ ವಹಿಸಿದ್ದೇವೆ’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

‘ಹೊಸ ವೈರಾಣು ಹರಡಿದ ಕುರಿತು ಕೇಂದ್ರ ಸರ್ಕಾರ ಅಥವಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಯಾವುದೇ ಸೂಚನೆ ಬಂದಿಲ್ಲ. ಅಲ್ಲಿ ಸಾಂಕ್ರಾಮಿಕ ದೊಡ್ಡ ಪ್ರಮಾಣದಲ್ಲಿ ಹರಡಿದರೂ ಭಯ ಪಡಬೇಕಿಲ್ಲ. ರಾಜ್ಯದ ಎಲ್ಲೆಡೆ ಐಸಿಯು ಬೆಡ್‌, ವೆಂಟಿಲೇಟರ್‌ ಸೇರಿದಂತೆ ಎಲ್ಲವನ್ನೂ ಸಿದ್ಧಪಡಿಸಿಕೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT