ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರ ಸಾಮಗ್ರಿ ನೇರ‌ ವಿತರಣೆಗೆ ನಿರ್ಬಂಧ

Last Updated 31 ಮಾರ್ಚ್ 2020, 10:20 IST
ಅಕ್ಷರ ಗಾತ್ರ

ಬೆಳಗಾವಿ: ‘ಕೊರೊನಾ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸಲು ಲಾಕ್ ಡೌನ್ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ಸಂಘ –ಸಂಸ್ಥೆಗಳು ಸಿದ್ಧಪಡಿಸಿದ ಆಹಾರ ಅಥವಾ ಆಹಾರ ಸಾಮಗ್ರಿಗಳನ್ನು ಸಾರ್ವಜನಿಕರಿಗೆ ನೇರವಾಗಿ ವಿತರಿಸುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

‘ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳುವ ದೃಷ್ಟಿಯಿಂದ ಈ ನಿರ್ಬಂಧ ವಿಧಿಸಲಾಗಿದೆ. ಸಂಘ-ಸಂಸ್ಥೆಗಳವರು ಒಂದು ವೇಳೆ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲು ಬಯಸಿದರೆ ಅಂತಹ ಸಾಮಗ್ರಿಗಳನ್ನು ಮಹಾನಗರ ಪಾಲಿಕೆಗೆ ತಲುಪಿಸಬೇಕು. ಹೀಗೆ ಸಂಗ್ರಹವಾಗುವ ಆಹಾರಧಾನ್ಯ ಅಥವಾ ಸಿದ್ಧಪಡಿಸಿದ ಆಹಾರವನ್ನು ಪಾಲಿಕೆಯ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಹಂಚಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

‘ಸಂಕಷ್ಟದಲ್ಲಿರುವ ಎಲ್ಲರಿಗೂ ಆಹಾರ ತಲುಪಿಸುವ ಜೊತೆಗೆ ಅವರ ಆರೋಗ್ಯ ಕಾಪಾಡುವುದೂ ಮಹತ್ವದ್ದಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ಸಂಘ-ಸಂಸ್ಥೆಗಳವರು ಆಹಾರ ಸಾಮಗ್ರಿಗಳನ್ನು ಅಥವಾ ಸಿದ್ಧಪಡಿಸಿದ ಆಹಾರವನ್ನು ತಲುಪಿಸಲು ಪಾಲಿಕೆಯ ಎಂಜಿನಿಯರ್ ಲಕ್ಷ್ಮಿ ಸುಳಗೇಕರ (ಮೊ:9449193973) ಅವರನ್ನು ಸಂಪರ್ಕಿಸಬಹುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT