ಬಾಕಿ ಬಿಲ್ ಪಾವತಿ: ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ
ಬೆಳಗಾವಿ: ‘ಜಿಲ್ಲೆಯಲ್ಲಿ 2020-21ನೇ ಹಂಗಾಮಿಗೆ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಬಾಕಿ ಬಿಲ್ ಅನ್ನು ತಕ್ಷಣವೇ ಪಾವತಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಶುಕ್ರವಾರ ಪ್ರಕಟಣೆ ನೀಡಿರುವ ಅವರು, ‘ಕಬ್ಬು ನಿಯಂತ್ರಣ ಅಧಿನಿಯಮ-1966ರಂತೆ ಕಬ್ಬು ಸರಬರಾಜು ಮಾಡಿದ 14 ದಿನದೊಗೆ ಮೊತ್ತ ಪಾವತಿಸಬೇಕೆಂಬ ನಿಯಮವಿದೆ. ಆದರೆ, ಸಕ್ಕರೆ ಆಯುಕ್ತರು ಬಿಡುಗಡೆ ಮಾಡಿರುವ ವರದಿ ಪ್ರಕಾರ ಇನ್ನೂ ಕೆಲವು ಕಾರ್ಖಾನೆಯವರು ಶೇ 90ಕ್ಕಿಂತ ಕಡಿಮೆ ಮೊತ್ತ ಪಾವತಿಸಿರುವುದು ತಿಳಿದುಬಂದಿದೆ. ಆದ್ದರಿಂದ ಬಾಕಿ ಉಳಿದಿರುವ ಬಿಲ್ ಅನ್ನು ಮಾಸಾಂತ್ಯದೊಳಗೆ ಪಾವತಿಸಬೇಕು’ ಎಂದು ತಾಕೀತು ಮಾಡಿದ್ದಾರೆ.
‘ಬಾಕಿ ಬಿಲ್ ಪಾವತಿಸಿದ ಬಳಿಕ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕು. ಒಂದು ವೇಳೆ ವರದಿ ಸಲ್ಲಿಸಲು ತಪ್ಪಿದ್ದಲ್ಲಿ ಕಬ್ಬು ನಿಯಂತ್ರಣ ಅಧಿನಿಯಮ-1966ರಲ್ಲಿ ಶಿಸ್ತು ಕ್ರಮ ಜರುಗಿಸಲು ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರಿಗೆ ಶಿಪಾರಸು ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.