ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಜಾತಿ ಪ್ರಮಾಣ ಪತ್ರದ ಹಾವಳಿ: ಪಿ. ರಾಜೀವ್ ದೂರು

Last Updated 8 ಜುಲೈ 2021, 13:12 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರದ ಹಾವಳಿ ಜಾಸ್ತಿಯಾಗುತ್ತಿದೆ. ಅಧಿಕಾರಿಗಳಿಗೆ ಗೊತ್ತಿದ್ದರೂ ಅನರ್ಹರಿಗೆ ಪ್ರಮಾಣಪತ್ರ ವಿತರಿಸುತ್ತಿದ್ದಾರೆ’ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ್ ದೂರಿದರು.

ಇಲ್ಲಿ ಗುರುವಾರ ನಡೆದ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಅರ್ಹರಿಗೆ ಅನ್ಯಾಯವಾಗುತ್ತಿದೆ’ ಎಂದು ತಿಳಿಸಿದರು.

‘ನಿಯಮಾವಳಿ ಪ್ರಕಾರ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಎರಡು ವರ್ಷದಲ್ಲಿ ಪೂರ್ಣಗೊಳ್ಳಬೇಕು. ಆದರೆ, ನಾಲ್ಕು ವರ್ಷಗಳಾದರೂ ಸಿದ್ಧಗೊಳ್ಳುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಚನ್ನದಾಸರುಗೆ ಸೇರಿದ 8 ಹಾಗೂ ಗೋಕಾಕ ತಾಲ್ಲೂಕಿನಲ್ಲಿ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದ 25 ಪ್ರಕರಣಗಳ ಕುರಿತು ಪರಿಶೀಲಿಸಲಾಗುತ್ತಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ತಿಳಿಸಿದರು.

‘ಸುಳ್ಳು ಜಾತಿ ಪ್ರಮಾಣಪತ್ರ ವಿತರಣೆಗೆ ಸಂಬಂಧಿಸಿದಂತೆ ಶಾಸಕರು ಹಾಗೂ ಇಲಾಖೆಯ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಿ ಸಮಗ್ರವಾಗಿ ಚರ್ಚಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT