ಶುಕ್ರವಾರ, ಡಿಸೆಂಬರ್ 4, 2020
24 °C

ಪಕ್ಷ ವಿರೋಧಿ ಚಟುವಟಿಕೆ: ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯದರ್ಶಿ ಉಚ್ಚಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಪಕ್ಷ ವಿರೋಧಿ ಚಟುವಟಿಕೆ ಕಾರಣದಿಂದಾಗಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ ದೇವಪ್ಪ ಪೂಜೇರ ಅವರನ್ನು ಉಚ್ಛಾಟಿಸಲಾಗಿದೆ’ ಎಂದು ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ.

ಸವದತ್ತಿ–ಯಲ್ಲಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನವಳ್ಳಿ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ವಿಜಯ ಅಮಠೆ ವಿರುದ್ಧ ಅವರು ಕೆಲಸ ಮಾಡಿದ್ದಾರೆ. ತಾಯಿ ಪಾರ್ವತಿ ಪೂಜೇರ ಅವರನ್ನು ಕಾಂಗ್ರೆಸ್‌ನಿಂದ ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಿ ಬೆಂಬಲಿಸಿದ್ದಾರೆ. ಈ ಬಗ್ಗೆ ಅಲ್ಲಿನ ಶಾಸಕರೂ ಆದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಪತ್ರ ಬರೆದಿದ್ದರು. ಸವದತ್ತಿ ಮಂಡಲದ ಅಧ್ಯಕ್ಷ ಈರಣ್ಣ ಚಂದರಗಿ ಸೂಚನೆಯನ್ನೂ ಧಿಕ್ಕರಿಸಿ ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ, ಪಕ್ಷದ ಜವಾಬ್ದಾರಿಗಳನ್ನು ಹಿಂಪಡೆಯಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು