ಹುಕ್ಕೇರಿ: ‘ಜೀವನದಲ್ಲಿ ಕಷ್ಟ ಬರುವುದು ಸಹಜ. ಜನರು ಭಯಪಡದೆ ಜೀವನ ಸಾಗಿಸಬೇಕು. ಸರ್ಕಾರ ಮಂಜೂರು ಮಾಡಿದ ಧನಸಹಾಯದಿಂದ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿ ಬದುಕು ರೂಪಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಸರ್ಕಾರ ಮಂಜೂರು ಮಾಡಿದ ಧನಸಹಾಯದ ಚೆಕ್ ವಿತರಿಸಿ ಅವರು ಮಾತನಾಡಿದರು.

ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ತಾಲ್ಲೂಕಿನ ಮಾವನೂರ ಗ್ರಾಮದ ರೈತ ಕೆಂಪಣ್ಣ ಗುಡಗನಟ್ಟಿ, ಅರ್ಜುನವಾಡದ ರೈತ ಮಹಿಳೆ ಸಿದ್ದವ್ವ ಕರಿಸಿದ್ದ ದಡ್ಡಿ (45) ಅವರ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.

ತಹಶೀಲ್ದಾರ್ ಮಂಜುಳಾ ನಾಯಕ, ಸಹಾಯಕ ಕೃಷಿ ನಿರ್ದೇಶಕ ಆರ್.ಬಿ. ನಾಯ್ಕರ್, ಪುರಸಭೆ ಅಧ್ಯಕ್ಷ ಇಮ್ರಾನ್ ಮೊಮೀನ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಹಾಂತೇಶ ಮಗದುಮ್ಮ, ಆಪ್ತ ಸಹಾಯಕ ಪ್ರಕಾಶ ಬಸ್ಸಾಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.