ಶುಕ್ರವಾರ, ನವೆಂಬರ್ 27, 2020
23 °C

ಗರ್ಭಿಣಿ ದಾಖಲಿಸಿಕೊಳ್ಳದ ಜಿಲ್ಲಾಸ್ಪತ್ರೆ ಸಿಬ್ಬಂದಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದ ಕಾರಣಕ್ಕೆ ಗರ್ಭಿಣಿಯೊಬ್ಬರು ಮತ್ತು ಕುಟುಂಬದವರು ಪರದಾಡಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಮಹಿಳೆಗೆ ಪ್ರಸವ ವೇದನೆ ಕಾಣಿಸಿಕೊಂಡಿತ್ತು. ಹೆರಿಗೆಗಾಗಿ ಕುಟುಂಬದವರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ‘ಈ ಆಸ್ಪತ್ರೆಯಲ್ಲಿ ಕೋವಿಡ್–19 ಸೋಂಕಿತರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತದೆ. ಇತರ ರೋಗಿಗಳನ್ನು ದಾಖಲಿಸಿಕೊಳ್ಳುವುದಿಲ್ಲ. ಸರ್ಕಾರದಿಂದಲೇ ಈ ಸೂಚನೆ ಇದೆ’ ಎಂದು ಅಲ್ಲಿನ ಸಿಬ್ಬಂದಿ  ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಎಷ್ಟೇ ಮನವಿ ಮಾಡಿದರೂ ಸಿಬ್ಬಂದಿಯಿಂದ ಸ್ಪಂದನೆ ಸಿಗಲಿಲ್ಲ ಮತ್ತು ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ ಎಂದು ತಿಳಿದುಬಂದಿದೆ.

ಇದೇ ಆಸ್ಪತ್ರೆಯಲ್ಲಿ ಖಾಸಗಿ ಅಂಬ್ಯುಲೆನ್ಸ್ ಸೇವೆ ಒದಗಿಸುತ್ತಿರುವ ಕರವೇ ಮುಖಂಡ ಗಣೇಶ ರೋಕಡೆ ಅವರು ವಿಷಯ ತಿಳಿದು ನೆರವಿಗೆ ಧಾವಿಸಿದ್ದಾರೆ. ಖಾಸಗಿ ಆಸ್ಪತ್ರೆ ಸಂಪರ್ಕಿಸಿ, ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟು ಅಲ್ಲಿಗೆ ದಾಖಲಿಸಿದ್ದಾರೆ. ಮಹಿಳೆಗೆ ಅಗತ್ಯವಿದ್ದ ರಕ್ತ ದಾನವನ್ನೂ ಮಾಡಿದ್ದಾರೆ. ಆ ಮಹಿಳೆ ಮಧ್ಯರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಇಡೀ ಕುಟುಂಬಕ್ಕೆ ನೆರವಾಗಿದ್ದಾರೆ. ಸಹಾಯಹಸ್ತ ಚಾಚಿದ ಹಾಗೂ ಸಮಯಪ್ರಜ್ಞೆ ಮೆರೆದ ಗಣೇಶ ಅವರನ್ನು ಆಸ್ಪತ್ರೆಯವರು ಶನಿವಾರ ಸನ್ಮಾನಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.