ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ

Last Updated 1 ನವೆಂಬರ್ 2019, 14:23 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಅವರು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಅನುಕೂಲವಾಗುವಂತೆ ಇಲ್ಲಿನ ಜಿಲ್ಲಾ ಪಂಚಾಯ್ತಿ ಹಳೆ ಕಟ್ಟಡದಲ್ಲಿ ಸ್ಥಾಪಿಸಿರುವ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಿದರು.

‘ಜಿಲ್ಲೆಯ ಜನರು ಈ ಕಚೇರಿಯಲ್ಲಿ ಅಹವಾಲು ಸಲ್ಲಿಸಬಹುದಾಗಿದೆ. ತಿಂಗಳಲ್ಲಿ ಮೂರ್ನಾಲ್ಕು ಬಾರಿ ಸಾರ್ವಜನಿಕರಿಗೆ ಲಭ್ಯವಿರುತ್ತೇನೆ. ಅಹವಾಲುಗಳನ್ನು ಸ್ವೀಕರಿಸಿ, ಮುಂದಿನ ಕ್ರಮಕ್ಕೆ ಕಳುಹಿಸಲು ಅನುಕೂಲವಾಗುವಂತೆ ಅಗತ್ಯ ಸಿಬ್ಬಂದಿಯನ್ನು ಒದಗಿಸಲಾಗುವುದು’ ಎಂದು ತಿಳಿಸಿದರು.

‘ಜಿಲ್ಲಾಡಳಿತ ಭವನ ಸ್ಥಾಪಿಸಲು ಅಗತ್ಯವಿರುವ ಒಂದೆರಡು ಸ್ಥಳಗಳನ್ನು ಪರಿಶೀಲಿಸಿ ಮುಖ್ಯಮಂತ್ರಿಯಿಂದ ಅನುಮೋದನೆ ಕೊಡಿಸಲಾಗುವುದು.

‘ರಾಜ್ಯೋತ್ಸವ ಸಂದರ್ಭದಲ್ಲಿ ಕರಾಳ ದಿನ ಆಚರಿಸುವವರು ಕಾನೂನು ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಶಾಂತಿಯುತ ಪ್ರತಿಭಟನೆಗೆ ಕಾನೂನು ಪ್ರಕಾರ ಅನುಮತಿ ಕೊಡಬೇಕಾಗುತ್ತದೆ. ಅಂತೆಯೇ ಅನುಮತಿ ನೀಡಲಾಗಿದೆ. ಆದರೆ, ಕಾನೂನು ಉಲ್ಲಂಘಿಸಿದರೆ ಸಹಿಸಲಾಗದು’ ಎಂದರು.

ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಐಜಿಪಿ ಎಚ್.ಜಿ. ರಾಘವೇಂದ್ರ ಸುಹಾಸ್, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಬಿ‌.ಎಸ್. ಲೋಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT