ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.

ನಗರದ ಮತದಾರರಿಗೆ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸಿದ್ದಾರೆ.

ವಿಡಿಯೊ ಸಂದೇಶದ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತವನ್ನು ಬೆಳಗಾವಿ ಜನ ಮೆಚ್ಚಿದ್ದಾರೆ ಕೊರೊನಾ, ಪ್ರವಾಹದ ಹೊಡೆತದ ಮಧ್ಯೆಯೂ ಬಿಜೆಪಿ ಒಳ್ಳೆಯ ಆಡಳಿತ ನೀಡುತ್ತಿದೆ ಎಂದಿದ್ದಾರೆ.

ಬೆಳಗಾವಿ ಪಾಲಿಕೆ ಚುನಾವಣೆಗೆ ನಾನೇ ಉಸ್ತುವಾರಿ ಆಗಿದ್ದೆ. ಪಕ್ಷದ ಅಧ್ಯಕ್ಷರು ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ಪಕ್ಷದ ನಾಯಕರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡಿದ್ದೇವೆ. ಬೆಳಗಾವಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲು ಶಾಸಕರು, ಸಂಸದರು, ಕಾರ್ಯಕರ್ತರು ಶ್ರಮಿಸಿದ್ದಾರೆ ಎಂದಿದ್ದಾರೆ.

ನಮ್ಮ ಉತ್ತಮ ಆಡಳಿತಕ್ಕೆ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.