ಬೆಳಗಾವಿ: ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಡಿ.ಕೆ.ಶಿವಕುಮಾರ್ ಹಾಗೂ ಅವರ ಸಂಪುಟದ ಸದಸ್ಯರು ಪ್ರಮಾಣವಚನ ಸ್ವೀಕರಿಸುವುದನ್ನು ಕಣ್ತುಂಬಿಕೊಳ್ಳಲೆಂದು ನಗರದ ಕಾಂಗ್ರೆಸ್ ಭವನದ ಮುಂದೆ ಬೃಹತ್ ಎಲ್ಇ ಪರದೆ ಅಳವಡಿಸಲಾಗಿತ್ತು.

ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ಕಾಂಗ್ರೆಸ್ನ ಕಾರ್ಯಕರ್ತರು ಮತ್ತು ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.

ಶಿವಕುಮಾರ್ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ, ಜಯಘೋಷಗಳನ್ನು ಕೂಗಿದರು. ಪಟಾಕಿ ಸಿಡಿಸಿ, ತಮಟೆ ಬಾರಿಸಿ ಖುಷಿಪಟ್ಟರು.

ಪ್ರಮಾಣವಚನ ಕಾರ್ಯಕ್ರಮ ಮುಗಿದ ನಂತರ ಕಾರ್ಯಕರ್ತರು ರಾಣಿ ಚನ್ನಮ್ಮನ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿ ವಿಜಯೋತ್ಸವ ಮಾಡಿದರು. ಶಿವಕುಮಾರ್ ಹಾಗೂ ಸಚಿವ ಸತೀಶ ಜಾರಕಿಹೊಳಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.

ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಮಾತನಾಡಿ, ‘38 ವರ್ಷ ರಾಜಕೀಯ ಜೀವನ ನಡೆಸಿದ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಖುಷಿ ತಂದಿದೆ. ಸಿದ್ದರಾಮಯ್ಯ ಅವರ ಮಾದಿಯಲ್ಲಿ ಅವರೂ ಉತ್ತಮ ಆಡಳಿತ ನೀಡಲಿದ್ದಾರೆ. ಸತೀಶ ಜಾರಕಿಹೊಳಿ ಅವರೂ ಸಚಿವರಾಗಿದ್ದು, ಕಾಂಗ್ರೆಸ್ಗೆ ಇನ್ನಷ್ಟು ಶಕ್ತಿ ಬಂದಂತಾಗಿದೆ’ ಎಂದರು.

‘ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರೂ ಉತ್ತಮ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ ಅವರಿಗೆ ಸೂಕ್ತ ಸ್ಥಾನಮಾನ ಕೊಡಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.