ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?: ಕಾಂಗ್ರೆಸ್‌ಗೆ ಬಿ.ಸಿ.ಪಾಟೀಲ ಪ್ರಶ್ನೆ

ಹರಿಪ್ರಸಾದ್ ಹೇಳಿಕೆಗೆ ಬಿ.ಸಿ. ಪಾಟೀಲ ತಿರುಗೇಟು
Last Updated 15 ಸೆಪ್ಟೆಂಬರ್ 2020, 3:54 IST
ಅಕ್ಷರ ಗಾತ್ರ

ಬೆಳಗಾವಿ: ‘ಎಸ್‌ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?’

‘ಆರ್‌ಎಸ್‌ಎಸ್ ರೀತಿ ನಮ್ಮ ಶತ್ರುಗಳನ್ನೂ ತಯಾರಿಸುವುದಿಲ್ಲ’ ಎಂಬ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದ್ದು ಹೀಗೆ.

‘ಬೆಂಗಳೂರಿನ ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ಗಲಾಟೆ ಮಾಡಿದವರ‍್ಯಾರು? ಶತ್ರುಗಳನ್ನು ತಯಾರಿಸುತ್ತಿರುವವರು ಅವರೇ. ದೇಶದ್ರೋಹಿಗಳು ಅವರಲ್ಲೇ ಜಾಸ್ತಿ ಜನ ಇದ್ದಾರೆ. ಕೋಮು ಗಲಭೆಗೆ ಪ್ರಚೋದಿಸುತ್ತಾರೆ’ ಎಂದು ದೂರಿದರು.

‘ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಗ್ಗೆ ಪ್ರಶ್ನಿಸುವ ಯೋಗ್ಯತೆ ಕಾಂಗ್ರೆಸ್‌ನವರಿಗೆ ಇಲ್ಲ. ಇನ್ನೂ 50 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರಬೇಕಾಗುತ್ತೆ ಎಂದು ಆ ಪಕ್ಷದ ನಾಯಕ ಗುಲಾಂ ನಬಿ ಆಜಾದ್‌ ಅವರೇ ಹೇಳಿದ್ದಾರೆ. ಕೋವಿಡ್–19 ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿಲ್ಲ’ ಎಂದರು.

‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸೀಸನಲ್‌ ರಾಜಕಾರಣಿ. ಆಗಾಗ, ಮಾಫಿಯಾಗಳ ಬಗ್ಗೆ ಮಾತನಾಡುತ್ತಿರುತ್ತಾರೆ. ನನ್ನ ಸರ್ಕಾರ ಬೀಳಲು ಡ್ರಗ್ಸ್‌ ಮಾಫಿಯಾದ ಹಣ ಕಾರಣ ಎಂದಿರುವ ಅವರು, ಅಧಿಕಾರದಲ್ಲಿದ್ದಾಗ ಕ್ರಮ ಕೈಗೊಳ್ಳಲಿಲ್ಲವೇಕೆ?’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT