ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಕೀಕೃತ ಆಸ್ತಿಪತ್ರಗಳ ವಿತರಣೆ

Last Updated 5 ಜುಲೈ 2021, 12:09 IST
ಅಕ್ಷರ ಗಾತ್ರ

ಅಥಣಿ (ಬೆಳಗಾವಿ): ತಾಲ್ಲೂಕಿನ ಅರಟಾಳ ಹಾಗೂ ಬಡಚಿ ಗ್ರಾಮಗಳಲ್ಲಿ ‘ಸ್ವಾಮಿತ್ವ’ ಯೋಜನೆ ಪೂರ್ಣವಾದ ಹಿನ್ನೆಲೆಯಲ್ಲಿ, ರೈತರಿಗೆ ಗಣಕೀಕೃತ ಆಸ್ತಿಪತ್ರಗಳನ್ನು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೋಮವಾರ ವಿತರಿಸಿದರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆ, ಭೂಮಾಪನ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗಣಕೀಕೃತ ಆಸ್ತಿಪತ್ರಗಳನ್ನು ಹೊಂದುವುದರಿಂದಾಗಿ ಅನ್ಯ ವ್ಯಕ್ತಿಗಳು ಸುಲಭವಾಗಿ ತಿದ್ದುಪಡಿ ಮಾಡಲು ಸಾಧ್ಯವಾಗುವುದಿಲ್ಲ. ಎಲ್ಲಿ ಬೇಕಾದರೂ ನಾವು ಗಣಕೀಕೃತ ಆಸ್ತಿಪತ್ರಗಳನ್ನು ಪಡೆಯಬಹುದು. ಇದರಿಂದಾಗಿ ರೈತರಿಗೆ ಅತಿ ಹೆಚ್ಚು ಅನುಕೂಲಕರವಾಗಲಿದೆ’ ಎಂದರು.

‘ರಾಜ್ಯದಲ್ಲೇ ಮೊದಲ ಬಾರಿಗೆ ಅರಟಾಳ ಹಾಗೂ ಬಡಚಿ ಗ್ರಾಮಗಳಲ್ಲಿ ಕಾರ್ಯಕ್ರಮ ಪೂರ್ಣಗೊಂಡಿದೆ’ ಎಂದು ತಿಳಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ರೂ‍ಪಿಸಿದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಗ್ರಾಮಗಳ ಆಸ್ತಿ ಗುರುತಿಸುವ ಕಾರ್ಯ ನಡೆದಿದೆ’ ಎಂದು ಹೇಳಿದರು.

ಭೂಮಾಪನ ಇಲಾಖೆ ಉಪ ನಿರ್ದೇಶಕ ಮೋಹನ್ ಶಿವಣ್ಣ, ಸಹಾಯಕ ನಿರ್ದೇಶಕ ಪುನೀತ್ ಪಾಸೋಡಿ,ಮುಖಂಡರಾದ ಅಪ್ಪಾಸಾಬ ಅವತಾಡೆ, ಎಸ್. ಕಮತಗಿ, ಪಿಡಿಒ ಲಕ್ಷ್ಮಣ ಬಾಗೆನ್ನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT