ಬೇಡಿಕೆ ಈಡೇರಿಸದೇ ಉ.ಕರ್ನಾಟಕಕ್ಕೆ ಬರಬೇಡಿ: ಸಿಎಂಗೆ ಹೋರಾಟಗಾರರ ಎಚ್ಚರಿಕೆ

7

ಬೇಡಿಕೆ ಈಡೇರಿಸದೇ ಉ.ಕರ್ನಾಟಕಕ್ಕೆ ಬರಬೇಡಿ: ಸಿಎಂಗೆ ಹೋರಾಟಗಾರರ ಎಚ್ಚರಿಕೆ

Published:
Updated:

ಬೆಳಗಾವಿ: ‘ಪ್ರಮುಖ ಇಲಾಖೆಗಳ ಕಚೇರಿಗಳನ್ನು ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು. ಇಲ್ಲವೇ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಈ ಭಾಗದಲ್ಲಿ ಕೈಗೊಳ್ಳುವ ಪ್ರವಾಸ ಸಂದರ್ಭದಲ್ಲಿ ತೀವ್ರವಾಗಿ ಪ್ರತಿಭಟಿಸಲಾಗುವುದು’ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ ಎಚ್ಚರಿಕೆ ನೀಡಿದರು.

‘ಈ ಭಾಗದ ಜನರ ಬೇಡಿಕೆ ಈಡೇರುವವರೆಗೂ ಅವರು ಇಲ್ಲಿಗೆ ಕಾಲಿಡಬಾರದು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಹಾಗೂ ಸುವರ್ಣ ವಿಧಾನಸೌಧವನ್ನು ಶಕ್ತಿ ಕೇಂದ್ರವನ್ನಾಗಿ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿ, ಮಠಾಧೀಶರ ನೇತೃತ್ವದಲ್ಲಿ ಧರಣಿ ನಡೆಸಲಾಗಿತ್ತು. 15 ದಿನಗಳಲ್ಲಿ ಕೆಲವು ಕಚೇರಿಗಳನ್ನು ಬೆಂಗಳೂರಿನಿಂದ ಬೆಳಗಾವಿಗೆ ಸ್ಥಳಾಂತರಿಸಲಾಗುವುದು. ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಈಡೇರಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಅಭಿವೃದ್ಧಿಗೆ ಕ್ರಮ ಕೈಗೊಳ್ಳದಿದ್ದಲ್ಲಿ, ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ. ಇದಕ್ಕಾಗಿ ರೂಪರೇಷೆಗಳನ್ನು ಶೀಘ್ರವೇ ಸಿದ್ಧಪಡಿಸಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಅಡಿವೇಶ ಇಟಗಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !