ಶನಿವಾರ, ಆಗಸ್ಟ್ 13, 2022
24 °C

‘ಕೊರೊನಾ ವೈರಸ್‌ಗೆ ಅಂಜಬೇಕಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ‘ಕೋವಿಡ್-19 ಬಗ್ಗೆ ಅಂಜಬೇಕಿಲ್ಲ. ಧೈರ್ಯದಿಂದ ಮುಂಜಾಗ್ರತೆ ವಹಿಸಿದರೆ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಬುಧವಾರ ಪಕ್ಷದ ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಕಾಂಗ್ರೆಸ್ ಕಾರ್ಯಕರ್ತರಿಗೆ ಬುಧವಾರ ಕೊರೊನಾ ಸೋಂಕು ತಪಾಸಣಾ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

‘ಕಡಿಮೆ ವೆಚ್ಚದಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಜನರು ಉಹಾಪೋಹಗಳಿಗೆ ಕಿವಿ ಕೊಡಬಾರದು’ ಎಂದು ಸಲಹೆ ನೀಡಿದರು.

ನಗರ ಹಾಗೂ ಗ್ರಾಮೀಣ ಘಟಕದ ಅಧ್ಯಕ್ಷ ಝಾಕೀರ ನದಾಫ, ಪ್ರಕಾಶ ಡಾಂಗೆ, ರಿಯಾಜ ಚೌಗಲಾ, ವಿವೇಕ ಜತ್ತಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ರಾಮಗಾನಟ್ಟಿ, ಮುನ್ನಾ ಖತೀಬ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.