ಶುಕ್ರವಾರ, ಏಪ್ರಿಲ್ 16, 2021
28 °C

ಎಂಇಎಸ್ ರ‍್ಯಾಲಿಗೆ ಅವಕಾಶ ನೀಡದಿರಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಮಹಾನಗರ ಪಾಲಿಕೆ ಎದುರು ಸ್ಥಾಪಿಸಿರುವ ಕನ್ನಡ ಧ್ವಜ ತೆರವುಗೊಳಿಸುವಂತೆ ಆಗ್ರಹಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಶಿವಸೇನಾದವರು ಮಾರ್ಚ್‌ 8ರಂದು ಹಮ್ಮಿಕೊಂಡಿರುವ ‍ಪ್ರತಿಭಟನಾ ರ‍್ಯಾಲಿಗೆ ಅವಕಾಶ ನೀಡಬಾರದು’ ಎಂದು ಒತ್ತಾಯಿಸಿ ‘ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ’ಯವರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

‘ಮಹಾರಾಷ್ಟ್ರದ ಶಿವಸೇನೆಯವರು ಪದೇ ಪದೇ ತಗಾದೆ ತೆಗೆಯುತ್ತಲೇ ಇದ್ದಾರೆ ಪಾಲಿಕೆ ಎದುರು ಕನ್ನಡ ಧ್ವಜ ತೆರವುಗೊಳಿಸುವಂತೆ ಆಗ್ರಹಿಸಲು ಅವರಾರು? ಭಗವಾಧ್ವಜ ಹಾರಿಸುತ್ತೇವೆ ಎಂದು ಧೈರ್ಯವಾಗಿ ಹೇಳುತ್ತಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಿವಸೇನಾ ಮುಖಂಡ ವಿಜಯ ದೇವಣೆ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನಾಡದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದನ್ನು ಸಹಿಸಬಾರದು’ ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಬಾಳಪ್ಪ ಗುಡಗೇನಟ್ಟಿ ನೇತೃತ್ವ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.