ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಾಲ ಮನ್ನಾ ಮಾಡಲು ಕೇಂದ್ರದ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪುರ

ಜೆಡಿಎಸ್‌ ರಾಷ್ಟ್ರೀಯ ಕೋರ್‌ ಸಮಿತಿ ಸದಸ್ಯ ಬಂಡೆಪ್ಪ ಕಾಶೆಂಪುರ
Published 26 ಏಪ್ರಿಲ್ 2024, 10:51 IST
Last Updated 26 ಏಪ್ರಿಲ್ 2024, 10:51 IST
ಅಕ್ಷರ ಗಾತ್ರ

ಬೆಳಗಾವಿ: ‘ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪ್ರಕಟಿಸಿದ 25 ಗ್ಯಾರಂಟಿಗಳಲ್ಲಿ ‘ರೈತರ ಸಾಲ ಮನ್ನಾ’ ಕೂಡ ಸೇರಿಸಲಾಗಿದೆ. ನಿಮಗೆ ನಿಜವಾಗಿ ರೈತರ ಬಗ್ಗೆ ಕಾಳಜಿ ಇದ್ದರೆ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮುನ್ನ ರೈತರ ಸಾಲ ಮನ್ನಾ ಮಾಡಬಹುದಿತ್ತು ಅಲ್ಲವೇ?’ ಎಂದು ಜೆಡಿಎಸ್‌ ರಾಷ್ಟ್ರೀಯ ಕೋರ್‌ ಸಮಿತಿ ಸದಸ್ಯ ಬಂಡೆಪ್ಪ ಕಾಶೆಂಪುರ ಟೀಕಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ‘ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ, ರೈತರ ಸಾಲ ಮನ್ನಾ ಮಾಡಿದ್ದರು. ರಾಜ್ಯ ಸರ್ಕಾರವೂ ಕೇಂದ್ರದ ಅನುದಾನಕ್ಕಾಗಿ ಕಾಯಬೇಕಿಲ್ಲ. ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್‌ನವರು ರೈತರ ಕಲ್ಯಾಣಕ್ಕಾಗಿ ಏನು ಕೊಡುಗೆ ನೀಡಿದ್ದೀರಿ. ನಿಮ್ಮ ನಂಬಿ ಮತ ಹಾಕಿದ ಬಡವರು ಈಗ ಪರಿತಪಿಸುತ್ತಿದ್ದಾರೆ’ ಎಂದು ದೂರಿದರು.

‘ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸ್ಥಗಿತಗೊಂಡಿವೆ. ಅಭಿವೃದ್ಧಿ ಕೆಲಸ ಕೈಗೊಳ್ಳಲು ಶಾಸಕರಿಗೂ ಅನುದಾನ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯ ಸರ್ಕಾರ ಮಾಡಿದ ₹1 ಲಕ್ಷ ಕೋಟಿ ಸಾಲದ ಹೊರೆ ಯಾರ ಮೇಲೆ ಹೊರಿಸಬೇಕು ಎಂದುಕೊಂಡಿದ್ದೀರಿ’ ಎಂದು ಪ್ರಶ್ನಿಸಿದರು.

‘ಗ್ಯಾರಂಟಿ ಯೋಜನೆಗಳನ್ನು ನಂಬಿ ಇಷ್ಟುದಿನ ಪ್ರಚಾರ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡರಿಗೂ ಈಗ ತಮ್ಮ ಸರ್ಕಾರದ ಯೋಜನೆಗಳ ಬಗ್ಗೆ ವಿಶ್ವಾಸ ಇಲ್ಲದಂತಾಗಿದೆ. ಹಾಗಾಗಿ ಚೊಂಬಿನ ಜಾಹೀರಾತು ಕೊಟ್ಟು, ಕೇಂದ್ರವು ಬರ ಪರಿಹಾರ ಕೊಡುತ್ತಿಲ್ಲ ಎಂದು ದೂರುತ್ತ ಮತ ಕೇಳಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಬಿಜೆಪಿ ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಸಿ.ಎನ್.ನಾಗರಾಜ, ಎಫ್.ಎಸ್‌.ಸಿದ್ದನಗೌಡರ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT