ಶನಿವಾರ, ನವೆಂಬರ್ 26, 2022
22 °C

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಾಲ್ಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ.

ಸುಳೇಭಾವಿ ಗ್ರಾಮದ ಮಹೇಶ ಮುರಾರಿ (26) ಹಾಗೂ ಪ್ರಕಾಶ ಹುಂಕ್ರಿಪಾಟೀಲ (24) ಹತ್ಯೆಯಾದವರು. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಘಟನೆಯಿಂದಾಗಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಇಬ್ಬರೂ ಯುವಕರು ಗುರುವಾರ ರಾತ್ರಿ ಸುಳೇಭಾವಿ ಗ್ರಾಮದ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ನಿಂತಿದ್ದರು. ಅಲ್ಲಿಗೆ ಬಂದ ದುಷ್ಕರ್ಮಿಗಳ ಗುಂಪು ಏಕಾಏಕಿ ಮಾರಕಾಸ್ತ್ರಗಳಿಂದ ಇಬ್ಬರನ್ನೂ ಕೊಚ್ಚಲು ಶುರು ಮಾಡಿತು. ದಾಳಿಯಿಂದ ತಪ್ಪಿಸಿಕೊಳ್ಳಲು ಇಬ್ಬರೂ ಓಡಿದರು. ಬೆನ್ನಟ್ಟಿದ ಗುಂಪು ಪದೇಪದೇ ಕೊಚ್ಚಿಹಾಕಿತು. ಅವರು ಸತ್ತಿದ್ದನ್ನು ಖಚಿತ ಮಾಡಿಕೊಂಡು ಪರಾರಿಯಾಯಿತು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ನಗರ ಪೊಲೀಸ್ ಆಯುಕ್ತ ‌ಡಾ.ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾಡಿ ಹಾಗೂ ಮಾರಿಹಾಳ‌ ಠಾಣೆ ಸಿಬ್ಬಂದಿ ಸೇರಿ ನೂರಕ್ಕೂ ಹೆಚ್ಚು ಪೊಲೀಸರು ಗ್ರಾಮಕ್ಕೆ ದೌಡಾಯಿಸಿದರು. ಎಲ್ಲೆಡೆ ಬಂದೋಬಸ್ತ್‌ ಮಾಡಿ, ರಾತ್ರಿ ಜನ ಹೊರಬರದಂತೆ ಎಚ್ಚರಿಕೆ ನೀಡಿದರು. ಘಟನೆಯಿಂದಾಗಿ ಗ್ರಾಮದ ಜನ ಬೆಚ್ಚಿಬಿದ್ದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು